Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟದ ಪಂಚವರ್ಣ ಸಂಸ್ಥೆಯ ವತಿಯಿಂದ 27ನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮ
ಕನ್ನಡ ಉಳಿಸುವ ಜತೆಗೆ ಪರಿಸರ ಕಾಳಜಿ  ಶ್ಲಾಘನೀಯ – ಠಾಣಾಧಿಕಾರಿ ರಾಘವೇಂದ್ರ

ಕೋಟ: ಕನ್ನಡ ಕಟ್ಟುವ ಕಾಯಕದ ನಡುವೆ ಪರಿಸರ ಉಳಿಸುವ ಪಂಚವರ್ಣ ಸಂಸ್ಥೆ ಕಾರ್ಯವೈಕರಿ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 27ನೇ ವರ್ಷದ  ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿ ಸಂಘಟನೆಗಳು ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಂಡಾಗ ಸಾಧನೆಯ ಮಜಲುಗಳನ್ನು ಕಾಣಲು ಸಾಧ್ಯ,229 ವಾರಗಳ ಪರಿಸ ಸಂರಕ್ಷಣೆ ಬರಿ ಮಾತಿನಲ್ಲಿ ಬಣ್ಣಿಸಲು ಸಾಧ್ಯವಿಲ್ಲ ಅದೊಂದು ದೊಡ್ಡ ಸಾಧನೆ ಅಂತಹ ಕೈಂಕರ್ಯದಲ್ಲಿ ತೊಡಗಿಕೊಂಡ ಸಂಘಟನೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದರಲ್ಲದೆ ಕನ್ನಡ ಭಾಷೆ ಅದರ ಉಳಿವು ರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಿಮಿತಗೊಳ್ಳದೆ ಮನೆ ಮನಗಳಲ್ಲಿ ನಿತ್ಯನಿರಂತೆಯನ್ನು ಕಾಣುವಂತ್ತಾಗಲಿ ಎಂದು ಶುಭಹಾರೈಸಿದರು. ಕೋಟ ಗ್ರಾ.ಪಂ ಅಧ್ಯಕ್ಷೆ  ಜ್ಯೋತಿ ಬಿ.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ,ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಶುಭಾಶಂಸನೆಗೈದರು.

ಪoಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದಲ್ಲಿ ಪರಿಸರವಾದಿ ಕೋ.ಗಿ.ನಾ,ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಪಂಚವರ್ಣ ಸಂಸ್ಥೆಯ ಗೌರವ ಸಲಹೆಗಾರ ಕೆ.ದಿನೇಶ್ ಗಾಣಿಗ, ಪಾಂಚಜನ್ಯ ಹೋಮ್ ಪ್ರಾಡೆಕ್ಟ್ ಮಾಲಿಕ ಗೋಪಾಲಕೃಷ್ಣ ಮಯ್ಯ,ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು, ಪoಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಾಸ್ತಾವನೆ ಸಲ್ಲಿಸಿದರು.

ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರೆ, ಪಂಚವರ್ಣ ಯುವಕ ಮಂಡಲದ ಕಾರ್ಯದರ್ಶಿ ಸುಧೀಂದ್ರ ಜೋಗಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು. ಕಾರ್ಯಕ್ರಮದ ನಂತರ ಕನ್ನಡ ವಾಹನ ಶೋಭಾಯಾತ್ರೆಗೆ ಕೋಟ ಠಾಣಾಧಿಕಾರಿ ರಾಘವೇಂದ್ರ ಚಾಲನೆ ನೀಡಿದರು.

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 27ನೇ ವರ್ಷದ  ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಧ್ವಜಾರೋಹಣ ನೆರವೆರಿಸಿದರು. ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ,ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *