
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:02.12.2024ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:03.12.2024 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು(1-12ನೇ ತರಗತಿವರೆಗೆ) ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಮಂಗಳೂರು: ಫೆoಗಲ್ ಚಂಡಮಾರುತ ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಸಿ ಕೆಲವು ಅನಾಹುತ ಸೃಷ್ಟಿಸಿದ ಬಳಿಕ ಈಗ ರಾಜ್ಯದಲ್ಲೂ ಚಂಡಮಾರುತದ ಪರಿಣಾಮ ಬೀರಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಉಡುಪಿ, ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲಾದ್ಯಂತ ಸೋಮವಾರ ಕೆಲವೆಡೆ ಭಾರೀ ಮಳೆಯಾಗಿದ್ದು, ಮಂಗಳವಾರವೂ (ಡಿ.3) ಮಳೆ ಮುಂದುವರಿಯುವುದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಲು ಸೂಚಿಸಿದೆ.
ತುರ್ತು ಸೇವೆಗೆ 24×7 ಕಂಟ್ರೋಲ್ ರೂಂ 1077/ 0824-2442590, ಮಂಗಳೂರು- 0824-2220587, ಉಳ್ಳಾಲ – 0824-2204424, ಬಂಟ್ವಾಳ ತಾಲೂಕು – 08255 -232500, ಪುತ್ತೂರು ತಾಲೂಕು – 08251-230349, ಬೆಳ್ತಂಗಡಿ ತಾಲೂಕು-08256-232047, ಕಡಬ- 08251-260435, ಸುಳ್ಯ ತಾಲೂಕು – 08257-231231, ಮೂಡಬಿದ್ರೆ ತಾಲೂಕು – 08258-238100, ಮುಲ್ಕಿ ತಾಲೂಕು – 0824-2294496 ಸಂಪರ್ಕಿಸಲು ಸೂಚನೆ ನೀಡಿದ್ದು, ಜಿಲ್ಲೆಯ ಜನತೆ ಎಚ್ಚರಿಕೆ ವಹಿಸಬೇಕಾಗಿದೆ. ಜಿಲ್ಲಾಧ್ಯಂತ ಭಾರಿ ಮಳೆ ಆಗುವ ಸಂಭವವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
Leave a Reply