
ಕುಂದಾಪುರ (ಡಿ. 04):ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಸಂಯುಕ್ತ ಆಶ್ರಯದಲ್ಲಿ
ಉಡುಪಿ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ “ಹೆಜ್ಜೆ -ಗೆಜ್ಜೆ” -ಮೊಗವೀರ ಸಾಂಸ್ಕೃತಿಕ ಸಿಂಚನವು ಡಿಸೆಂಬರ್ 07 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿದೆ.
ನಾಡೋಜ ಡಾ. ಜಿ ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಅಧ್ಯಕ್ಷತೆ ವಹಿಸಲಿದ್ದು, ಉದ್ಯಮಿಗಳಾದ ಆನಂದ ಸಿ. ಕುಂದರ್, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಶ್ರೀ ಜಯ.ಸಿ ಕೋಟ್ಯಾನ್, ರಾಜು ಮೆಂಡನ್ ವಂಡ್ಸೆ, ಉದಯಕುಮಾರ್ ಹಟ್ಟಿಯಂಗಡಿ, ಸತೀಶ್ ಅಮೀನ್ ಬಾರ್ಕೂರು, ದಿನೇಶ್ ಬಿ ಕಾಂಚನ್, ಲೋಹಿತಾಶ್ವ ಆರ್ ಕುಂದರ್, ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಮೊಗವೀರ ಯುವ ಸಂಘಟನೆಯ ವಿವಿಧ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದು ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














Leave a Reply