Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ : ಬಸ್ ನಿಲ್ದಾಣದ ಆಸುಪಾಸಿನಲ್ಲಿ ಅಕ್ರಮ ಚಟುವಟಿಕೆ ಆರೋಪ; ತಡರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದ ಖಾಕಿ..!!

ಉಡುಪಿ: ಉಡುಪಿ ನಗರ ಬಸ್ ನಿಲ್ದಾಣದ ಆಸುಪಾಸಿನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ನಗರ ಪೊಲೀಸರು ಮಂಗಳವಾರ ರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದರು.  ಉಡುಪಿ ನಗರ ಠಾಣೆಯ ಇನ್ಸ್ ಪೆಕ್ಟರ್ ರಾಮಚಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ರೌಂಡ್ಸ್ ಹಾಕಿದ ಪೊಲೀಸರು ತಡರಾತ್ರಿ ಓಡಾಡುತ್ತಿದ್ದ ಜನರಿಗೆ ಎಚ್ಚರಿಕೆ ನೀಡಿದರು.


ರಾತ್ರಿಯಾಗುತ್ತಿದ್ದಂತೆ ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣದ ಸುತ್ತಮುತ್ತ ಮಂಗಳಮುಖಿಯರ ಕಾಟ ಹೆಚ್ಚಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಿಟಿ ರೌಂಡ್ಸ್ ಹಾಕಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾದರು. ಬಸ್ ನಿಲ್ದಾಣ ಪರಿಸರದಲ್ಲಿ ತಡ ರಾತ್ರಿಯವರೆಗೂ ನಿಂತಿದ್ದ ಜನರನ್ನು ತೆರವುಗೊಳಿಸಿ ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *