
ಉಡುಪಿ : ಇಲ್ಲಿನ ವಿ.ಪಿ.ನಗರದ ಅನಂತ ಕಲ್ಯಾಣ ನಗರ ಕ್ರಾಸ್ನ ರಸ್ತೆಯ ಬದಿಯಲ್ಲಿ ಶುಕ್ರವಾರ ಬೆಳಗ್ಗೆ ಬಿಯರ್ ಬಾಟಲಿಯಿಂದ ಕತ್ತು ಕೊಯ್ದ ಮೃತಪಟ್ಟ ಸ್ಥಿತಿಯಲ್ಲಿ ಕಾಸರಗೋಡು ಜಿಲ್ಲೆಯ ನೀರ್ಚಾಲ್ ನಿವಾಸಿ ಶ್ರೀಧರ್(38) ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮೃತರೇ ತನ್ನ ಕತ್ತನ್ನು ಬಿಯರ್ ಬಾಟಲಿಯಿಂದ ಕೊಯ್ದು ಆತ್ಮಹತ್ಯೆ ಮಾಡಿಕೊಂಡಿರ ಬಹುದೆಂದು ಶಂಕಿಸಿದ್ದಾರೆ.
ಮಣಿಪಾಲ ಆಸ್ಪತ್ರೆಯ ಮುಂಭಾಗದಲ್ಲಿರುವ ಹೊಟೇಲೊಂದರಲ್ಲಿ ಬಾಣಸಿಗರಾಗಿ ಕೆಲಸ ಮಾಡಿಕೊಂಡಿದ್ದು, ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಇರುವ ರೂಮಿನಲ್ಲಿ ವಾಸವಾಗಿದ್ದರು. ರೂಮಿನಿಂದ ಅನಂತನಗರದ ಕಡೆ ನಡೆದುಕೊಂಡು ಹೋದ ಶ್ರೀಧರ್, ಅಲ್ಲೇ ರಸ್ತೆ ಬದಿಯಲ್ಲಿ ಬಿಯರ್ ಬಾಟಲಿಯಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಇದೊಂದು ಕೊಲೆ ಆಗಿರಬಹುದೆಂದು ಶಂಕಿಸಿ, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದರು.

ಬಳಿಕ ಹಲವು ಕಡೆಗಳಲ್ಲಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ ಶ್ರೀಧರ್, ತನ್ನ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ರುವುದು ಕಂಡುಬಂದಿವೆ. ಘಟನಾ ಸ್ಥಳದಿಂದ ದೂರದಲ್ಲಿದ್ದ ಸಿಸಿ ಟಿವಿಯಲ್ಲಿ ಈ ಅಸ್ಪಷ್ಟ ದೃಶ್ಯಗಳು ಕಂಡುಬಂದಿವೆ.
‘ಆರಂಭದಲ್ಲಿ ಶ್ರೀಧರ್ ಎಂಬವರನ್ನು ಯಾರೋ ಕೊಲೆ ಮಾಡಿರಬಹುದು ಎಂಬ ದೂರಿನಂತೆ ಕೊಲೆ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆ ಸಂದರ್ಭದಲ್ಲಿ ಕೊಲೆ ನಡೆದ ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಮೃತ ವ್ಯಕ್ತಿಯು ಬಿಯರ್ ಬಾಟಲಿಯಿಂದ ತಾನೇ ಕುತ್ತಿಗೆ ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಮರಣೋತ್ತರ ಪರೀಕ್ಷೆ ಮತ್ತು ಸಾಕ್ಷಿಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಉಡುಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.














Leave a Reply