ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು. ಇಂದು ದಿನಾಂಕ 10-12-2024 ರಂದು ಗೀತಾಂಜಲಿ ಸಿಲ್ಕ್ಸ್ ಉಡುಪಿ ಇಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭಾಗವಹಿಸಿ ನವದುರ್ಗಾ ಲೇಖನ ಯಜ್ಞದ ಕುರಿತು ಸಂಪೂರ್ಣ ವಿವರಣೆ ನೀಡಿ ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಪ್ರಚಾರ ಸಮಿತಿ ಸಂಚಾಲಕರಾದ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ಗೀತಾಂಜಲಿ ಸಿಲ್ಕ್ ಮಾಲಕರಾದ ಶ್ರೀರಾಮಕೃಷ್ಣ ನಾಯಕ್ (R.K), ಲಕ್ಷ್ಮಣ್ ನಾಯಕ್ , ರಮೇಶ್ ನಾಯಕ್ , ಹರೀಶ್ ನಾಯಕ್ , ಸಂತೋಷ್ ವಾಗ್ಲೆ , ಕಾಪು ಪುರಸಭಾ ವಾರ್ಡ್ ಸಮಿತಿ ಪ್ರಧಾನ ಮಹಿಳಾ ಸಂಚಾಲಕರಾದ ಗೀತಾಂಜಲಿ ಸುವರ್ಣ,ಸಂಚಾಲಕರಾದ ಸುವರ್ಧನ್ ನಾಯಕ್, ದಾಮೋದರ್ ಶರ್ಮ, ಸಂಸ್ಥೆಯ ಸಿಬ್ಬಂದಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
















Leave a Reply