
ಕೋಟ : ಪರಿಸರ ಸಂರಕ್ಷಿಸದಿದ್ದರೆ ಆಪತ್ತು ತಪ್ಪಿದಲ್ಲ ಎಂದು ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಸದಸ್ಯ ಭೋಜ ಪೂಜಾರಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ,ಜೆಸಿಐ ಸಿನಿಯರ್ ಲಿಜನ್ ಕೋಟ ಇವರುಗಳ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕದ ಸಂಯೋಜನೆಯೊoದಿಗೆ 234ನೇ ಭಾನುವಾರದ ಪರಿಸರಸ್ನೇಹಿ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕೋಟ ಗ್ರಾ.ಪಂ ಮೂಡುಗಿಳಿಯಾರು ಸಂಪರ್ಕಿಸುವ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಚಾಲನೆ ನೀಡಿ ರಸ್ತೆಗಳ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವ ಮನಸ್ಥಿತಿ ಕ್ರೂರವಾದದ್ದು ಇಂತಹ ಮನಸ್ಥಿತಿ ಬದಲಾಗಬೇಕಾದ ಅಗತ್ಯತೆಯನ್ನು ಒತ್ತಿ ಹೇಳಿದರ ಅವರು ಪ್ರಸ್ತುತ ಪಾಕೃತಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಪ್ರಕೃತಿ ಮುನಿದರೆ ಮನುಷ್ಯನಿಗೆ ಈ ಭೂಮಿಯಲ್ಲಿ ಜೀವಿಸಲು ಸಾಧ್ಯವಾಗದ ಸ್ಥಿತಿ ಸೃಷ್ಠಿಯಾಗುತ್ತದೆ ಇದಕ್ಕೆಲ ಪರಿಹಾರ ಕಾಣಬೇಕಾದರೆ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಮಾಡಬೇಕು ಎಂದು ಪಂಚವರ್ಣ ನಿರಂತರ ಪ್ರಕೃತಿ ಕಾಳಜಿಯ ಕಾರ್ಯವನ್ನು ಕೊಂಡಾಡಿದರು.
ಸುಮಾರು ಅರ್ಧ ಕಿಮೀ ರಸ್ತೆಯಲ್ಲಿನ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಬಾಟಲಿಗಳನ್ನು ತೆರವುಗೊಳಿಸಲಾಯಿತು.
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಕಾರ್ಯದರ್ಶಿ ವಸಂತಿ ಹಂದಟ್ಟು, ಜೆಸಿಐ ಸಿನಿಯರ್ ಕೋಟ. ಇದರ ಅಧ್ಯಕ್ಷ ಕೇಶವ ಆಚಾರ್ ,ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರವೀಂದ್ರ ಕೋಟ ಸಂಯೋಜಿಸಿದರು.
ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕದ ಸಂಯೋಜನೆಯೊAದಿಗೆ 234ನೇ ಭಾನುವಾರದ ಪರಿಸರಸ್ನೇಹಿ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕೋಟ ಗ್ರಾ.ಪಂ ಮೂಡುಗಿಳಿಯಾರು ಸಂಪರ್ಕಿಸುವ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಸದಸ್ಯ ಭೋಜ ಪೂಜಾರಿ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಕಾರ್ಯದರ್ಶಿ ವಸಂತಿ ಹಂದಟ್ಟು ಮತ್ತಿತರರು ಇದ್ದರು.
ಕೋಟ.ಡಿ.15 ಸ್ವಚ್ಛತೆ













Leave a Reply