Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಜನವರಿ.1, 2025ರಿಂದ ಜೋಗ ಜಲಪಾತಕ್ಕೆ 3 ತಿಂಗಳು ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಭಂದ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತಕ್ಕೆ ಮೂರು ತಿಂಗಳು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.

ಈ ಕಾರಣದಿಂದ ಜನವರಿ.1, 2025 ರಿಂದ ಮಾರ್ಚ್.15, 2025ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 08182 251444ಗೆ ಕರೆ ಮಾಡಿ, ಪಡೆಯಬಹುದಾಗಿದೆ

Leave a Reply

Your email address will not be published. Required fields are marked *