Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ವಿಧಿವಶ…!!

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್‌ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.

ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.

ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.

ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದು ಇವರ ಹೆಗ್ಗಳಿಕೆ ಹೆಗ್ಗಳಿಕೆ

Leave a Reply

Your email address will not be published. Required fields are marked *