Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ: ಮೇಲ್ಸೇತುವೆ ನಿರ್ಮಾಣ ಸ್ಥಳದಿಂದ ಗುಂಡಿಗೆ ಬಿದ್ದ ಕಾರು.!!

ಉಡುಪಿ : ಮೇಲ್ಸೇತುವೆ ಪಿಲ್ಲರ್‌ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್‌ನಲ್ಲಿ ನಡೆದಿದೆ.

ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂಬಲಪಾಡಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಮೇಲ್ಸೇತುವೆ ನಿರ್ಮಾಣವಾಗುತ್ತಿರುವ ಸ್ಥಳದ ಸುತ್ತಲೂ ಸಾಕಷ್ಟು ಬ್ಯಾರಿಕೇಡ್‌ಗಳು ಮತ್ತು ಎಚ್ಚರಿಕೆ ಫಲಕಗಳಿಲ್ಲದಿರುವುದು ಈ ಅಪಘಾತಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ಸುರಕ್ಷತಾ ಕ್ರಮಗಳು ಇಲ್ಲದಿರುವ ಕಾರಣ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *