
ಕೋಟ: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿಯ ವಾರ್ಷಿಕ ಮಹಾಸಭೆಯನ್ನು ಡಿ.29ರಂದು ಕೋಟ ಗ್ರಾಮ ಪಂಚಾಯತ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕೋಟ ವಲಯದ ಅಧ್ಯಕ್ಷ ಕೃಷ್ಣ ದೇವಾಡಿಗ ವಹಿಸಿದ್ದರು.
ಕಾರ್ಯಕ್ರಮವನ್ನು ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಶಾಂತ ಬಸ್ರೂರು ಉದ್ಘಾಟಿಸಿದರು. ಸ್ಮಾರ್ಟ್ ಕಾರ್ಡ್ ವಿತರಣೆಯನ್ನು ಟೈಲರ್ ಅಸೋಸಿಯೇಷನ್ ಜಿಲ್ಲಾ ಸಮಿತಿಯ ಕಾರ್ಯದರ್ಶಿ ದಯಾನಂದ ಕೋಟ್ಯಾನ್ ನೆರವೇರಿಸಿ ಸ್ಮಾರ್ಟ್ ಕಾರ್ಡ್ ಬಗ್ಗೆ ಮಾಹಿತಿಯನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ಕ್ಷೇತ್ರ ಸಮಿತಿ ಅಧ್ಯಕ್ಷ ನವೀನ್ ಬಿ ರಾವ್ , ಟೈಲರ್ ಅಸೋಸಿಯೇಷನ್ ಕೋಟ ವಲಯದ ಮಾಜಿಅಧ್ಯಕ್ಷ ಗಣೇಶ್ ಪೂಜಾರಿ,ಸಂಸ್ಥೆಯ ಹಿರಿಯರಾದ ವಿಶ್ವನಾಥ್ ಜತ್ತನ್,ಪರಮೇಶ್ವರ ಗಾಣಿಗ ಉಪಸ್ಥಿತರಿದ್ದರು. ಇದೇ ವೇಳೆ2024ರ ಸಾಲಿನ ವರದಿ ವಾಚನ ಮತ್ತು ಲೆಕ್ಕಪತ್ರ ಮಂಡಿಸಲಾಯಿತು. ಮಾಜಿಕಾರ್ಯದರ್ಶಿ ಅವಿನಾಶ್ ಕಾರ್ಯಕ್ರಮ ನಿರೂಪಿಸಿದರು.ಪ್ರದಾನಕಾರ್ಯದರ್ಶಿ ಸತೀಶ್ ಪೂಜಾರಿ ವಂದಿಸಿದರು.
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕೋಟ ಮತ್ತು ಸಾಲಿಗ್ರಾಮ ವಲಯ ವಾರ್ಷಿಕ ಮಹಾಸಭೆಯನ್ನು ಟೈಲರ್ ಅಸೋಸಿಯೇಷನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಶಾಂತ ಬಸ್ರೂರು ಉದ್ಘಾಟಿಸಿದರು. ಟೈಲರ್ ಅಸೋಸಿಯೇಷನ್ ಜಿಲ್ಲಾ ಸಮಿತಿಯ ಕಾರ್ಯದರ್ಶಿ ದಯಾನಂದ ಕೋಟ್ಯಾನ್, ಬ್ರಹ್ಮಾವರ ಕ್ಷೇತ್ರ ಸಮಿತಿ ಅಧ್ಯಕ್ಷ ನವೀನ್ ಬಿ ರಾವ್ , ಟೈಲರ್ ಅಸೋಸಿಯೇಷನ್ ಕೋಟ ವಲಯದ ಮಾಜಿಅಧ್ಯಕ್ಷ ಗಣೇಶ್ ಪೂಜಾರಿ ಮತ್ತಿತರರು ಇದ್ದರು.
Leave a Reply