Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟತಟ್ಟು- ಕೊರಗ ಕುಟುಂಬದ
ಮನೆ ನಿರ್ಮಾಣಕ್ಕೆ ಕೋಟ ಮೂರ್ತೆದಾರರ ಸಂಘ ದೇಣಿಗೆ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳಸಹಕಾರದೊಂದಿಗೆ ಇಲ್ಲಿನ ಕೋಟತಟ್ಟು
ವ್ಯಾಪ್ತಿಯ ಚಿಟ್ಟಿಬೆಟ್ಟು ಕೊರಗಕಾಲೋನಿಯಲ್ಲಿ ವಾಸ್ತವ್ಯ ಹೊಂದಿರುವ ಎoಟು ಕೊರಗ ಸಮುದಾಯದ ಕುಟುಂಬಗಳಿಗೆ 80.ಲಕ್ಷ ಅಂದಾಜು ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದು, ಈ ಮಹತ್ಕಾರ್ಯಕ್ಕೆ ಮೂರ್ತೆದಾರರ ಸೇವಾ ಸಹಕಾರಿ ಸಂಘ ಕೋಟದ ವತಿಯಿಂದ
ಇಪ್ಪತೈದು ರೂಪಾಯಿ ಚೆಕ್ ಅನ್ನು ಮಂಗಳವಾರ ಪಂಚಾಯತ್‌ಗೆ ಹಸ್ತಾoತರಿಸಿದರು.

ಈ ಸಂಧರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ವಿದ್ಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷರಾದ ಕೆ.ಕೊರಗ ಪೂಜಾರಿ, ಉಪಾಧ್ಯಕ್ಷ ಜಯರಾಮ ಪೂಜಾರಿ, ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು, ನಿರ್ದೇಶಕರಾದ ರಾಜು ಪೂಜಾರಿ, ಜಿ ಸಂಜೀವ ಪೂಜಾರಿ, ಪಿ ಕೃಷ್ಣ ಪೂಜಾರಿ, ರಾಮ ಪೂಜಾರಿ, ಮಂಜುನಾಥ ಪೂಜಾರಿ, ಭಾರತಿ ಎಸ್ ಪೂಜಾರಿ, ಪ್ರಭಾವತಿ ಡಿಬಿಲ್ಲವ ಹಾಗೂ ಕೊರಗ ಸಮುದಾಯದ ಕುಟುಂಬದವರು ಉಪಸ್ಥಿತರಿದ್ದರು.

ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಕೊರಗ ಕುಟುಂಬದ ಮನೆ ನಿರ್ಮಾಣಕ್ಕೆ ಮೂರ್ತೆದಾರರ ಸೇವಾ ಸಹಕಾರಿ ಸಂಘ ಕೋಟದ ವತಿಯಿಂದ ಇಪ್ಪತೈದು ರೂಪಾಯಿ ಚೆಕ್ ಅನ್ನು ಮಂಗಳವಾರ ಪoಚಾಯತ್‌ಗೆ ಹಸ್ತಾಂತರಿಸಿದರು.
ಪoಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ,
ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷರಾದ ಕೆ.ಕೊರಗ ಪೂಜಾರಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *