Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಇಂದಿನಿಂದ ಮುಧೋಳದಲ್ಲಿ 3 ದಿನ ರನ್ನನ ಗತವೈಭವದ ಸಂಭ್ರಮ
22 ರಂದು ರನ್ನವೈಭವಕ್ಕೆ ಪ್ರವಾಸೋದ್ಯಮ ಸಚಿವರಿಂದ ಚಾಲನೆ

ವರದಿ : ಅಶ್ವಿನಿ ಅಂಗಡಿ

ಬಾಗಲಕೋಟೆ : ಜಿಲ್ಲೆಯ ಮುಧೋಳದಲ್ಲಿ ಫೆಬ್ರವರಿ 22 ರಿಂದ 24 ವರೆಗೆ ನಡೆಯಲಿರುವ ರನ್ನವೈಭವಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು, ಸಂಜೆ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಚಾಲನೆ ನೀಡಲಿದ್ದಾರೆ.

ಉತ್ಸವದ ಅಂಗವಾಗಿ ಫೆಬ್ರವರಿ 22 ರಂದು ಬೆಳಿಗ್ಗೆ 10 ಗಂಟೆಗೆ ರನ್ನ ಬೆಳಗಲಿಯ ಬಂದಲಕ್ಷ್ಮೀ ದೇವಸ್ಥಾನದಿಂದ ಕವಿ ಚಕ್ರವರ್ತಿ ರನ್ನ ವೇದಿಕೆಯವರೆಗೆ ನಡೆಯಲಿರುವ ಜಾನಪದ ವಾಹಿನಿ ಕಲಾತಂಡಗಳ ಮೆರವಣಿಗೆಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಜನಪದ ಕೋಲಾಟ, ಡೊಳ್ಳಿನ ವಾದ್ಯ, ಶಹನಾಯಿ, ಸಂಬಾಳ, ಝಾಂಜ್ ಮೇಳ, ಪುರವಂತಿಕೆ, ವೀರಗಾಸೆ, ಪೂಜಾ ಕುಣಿತ ಸೇರಿದಂತೆ 30 ವಿವಿಧ ಕಲಾತಂಡಗಳು ಭಾಗವಹಿಸಲಿವೆ.

ಸಂಜೆ ರನ್ನ ಬೆಳಗಲಿಯ ಕವಿಚಕ್ರವರ್ತಿ ರನ್ನವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಸಚಿವ ಪ್ರೀಯಾಂಕ ಖರ್ಗೆ, ಜವಳಿ, ಸಕ್ಕರೆ ಮತ್ತು ಕೃಷಿ ಸಚಿವ ಶಿವಾನಂದ ಪಾಟೀಲ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಅಥಣಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಶಾಸಕರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.

ರನ್ನ ಕಾವ್ಯದರ್ಶನ ವಿಚಾರ ಸಂಕಿರಣ
ರನ್ನವೈಭವದ ಅಂಗವಾಗಿ ಫೆಬ್ರವರಿ 22 ರಂದು ಬೆಳಿಗ್ಗೆ 11 ಗಂಟೆಗೆ ಮುಧೋಳ ರನ್ನಭವನದ ಅಜೀತಸೇನಾಚಾರ್ಯ ವೇದಿಕೆಯಲ್ಲಿ ನಡೆಯಲಿರುವ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಮುಧೋಳನ ಹಿರಿಯ ವೈದ್ಯ ಮತ್ತು ಸಾಹಿತಿ ಡಾ.ಶಿವಾನಂದ ಕುಟಸದ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿರ್ದೇಶಕ ಡಾ.ಮಾಧವ ಪೆರಾಜೆ ವಹಿಸಲಿದ್ದು, ಹಿರಿಯ ಪ್ರಾದ್ಯಾಕಪ ಡಾ.ವೀರೇಶ ಬಡಿಗೇರ ಆಶಯ ನುಡಿ ಹೇಳಲಿದ್ದಾರೆ.

ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ವರೆಗೆ ಗೋಷ್ಠಿ-1ರಲ್ಲಿ ರನ್ನ ಕಾವ್ಯಧಾರ ಎಂಬ ವಿಷಯದ ಮೇಲೆ ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಮೈತ್ರೆಯಿಣಿ ಗದಿಗೆಪ್ಪ ಗೌಡರ ಮಹಾಕವಿ ರನ್ನನ ಕಾವ್ಯದಲ್ಲಿ ಸ್ತ್ರೀವಾದಿ ನಿಲುವು ಕುರಿತು, ಸಾಹಿತಿ ಡಾ.ಮೈನುದ್ದೀನ ರೇವಡಿಗಾರ ಗದಾಯುದ್ದದಲ್ಲಿ ರನ್ನನ ಸ್ವಾಗತ ಕುರಿತು ಮಾತನಾಡಲಿದ್ದಾರೆ. ಗೋಷ್ಠಿ-2ರಲ್ಲಿ ರನ್ನನ ಗಾಯುದ್ದದಲ್ಲಿ ಯುದ್ದ ವಿರೋಧಿ ನೀತಿ ಕುರಿತು ಅಮೀನಗಡ ಸಂ.ಸಂ.ಪ.ಪೂ ಕಾಲೇಜಿನ ಉಪ ಪ್ರಾಚಾರ್ಯ ಆರ್.ಜಿ.ಸನ್ನಿ, ರನ್ನನ ಗದಾಯುದ್ದದ ಸಂಗತಿ ಕುರಿತು ಮೈಸೂರು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಹಿರಿಯ ಸಂಶೋಧಕ ಡಾ.ಚಲಪತಿ ಆರ್ ಮಂಡನೆ ಮಾಡಲಿದ್ದಾರೆ.

ಗುರುಕಿರಣ ತಂಡದಿಂದ ಚಿತ್ರ ಸಂಗೀತ ಸುಧೆ
ಫೆ.22 ರಂದು ಸಂಜೆ ನಡೆಯಲಿರುವ ಕವಿಚಕ್ರವರ್ತಿ ರನ್ನವೇದಿಯಲ್ಲಿ ರಾತ್ರಿ 9 ರಇಂದ 11 ಗಂಟೆವರೆಗೆ ಸಂಗೀತ ಮಾಂತ್ರಿಕ ಗುರುಕಿರಣ ಹಾಗೂ ತಂಡದವರಿಂದ ಚಿತ್ರ ಸಂಗೀತ ಸುಧೆ ಕಾರ್ಯಕ್ರಮ ಜರುಗಲಿದೆ. ಇದರ ಜೊತೆಗೆ ಸಂಜೆ 4 ರಿಂದ ರಾತ್ರಿ 9 ಗಂಟೆವರೆಗೆ ಯಮನಪ್ಪ ಪೂಜೇರಿಯಿಂದ ಚೌಡಕಿ ಪದ, ಕುಮಾರ ಬಡಿಗೇರಿಂದ ಶಾಸ್ತ್ರೀಯ ಸಂಗೀತ, ಕೃಷ್ಣಪ್ಪ ಹೂಲಗೇರಿಯಿಂದ ಡೊಳ್ಳಿನ ಪದಗಳು, ಡಾ.ವೆಂಕಪ್ಪ ಸುಗತೇಕರಿಂದ ಗೊಂದಳಿ ಪದ, ನಟರಾಜ ಸಂಗೀತ ನೃತ್ಯನಿಕೇತನದಿಂದ ಸಮೂಹ ನೃತ್ಯ, ಕಾಂಚನಾ ಘಾರಗೆಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಈರಪ್ಪ ಅಥಣಿಯಿಂದ ಭಜನಾಪದ ಕಾರ್ಯಕ್ರಮ ನಡೆಯಲಿದೆ.

ರಾಚಯ್ಯ ಮುಧೋಳ ಜೋಗತಿ ಮತ್ತು ದೀಪ ನೃತ್ಯ, ನಟರಂಗ ಕಲ್ಚಲರ ಅಕಾಡೆಮಿಯಿಂದ ಲಂಬಾಣಿ ನೃತ್ಯ, ಪ್ರೀಯಾಂಕ ಸರಶೆಟ್ಟಿ ಭರತನಾಟ್ಯ, ಯಶವಂತ ವಾಜಂತ್ರಿಯಿಂದ ಹಾಸ್ಯ ಸಂಜೆ, ಉತ್ತರ ಕನ್ನಡ ಅಮೇಜಿಂಗ್ ಸಿದ್ದಿ ಬಾಯ್ಸ್‍ದಿಂದ ಸಿದ್ದ ಡಮಾಮಿ ನೃತ್ಯ, ಗುರುರಾಜ ಹೊಸಕೋಟಿಯಿಂದ ಜಾನಪದ ಸಂಗೀತ ಕಾರ್ಯಕ್ರಮ ಜರುಗಲಿವೆ. 

Leave a Reply

Your email address will not be published. Required fields are marked *