
ಕೋಟ: ಇಲ್ಲಿನ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕುನಾಯಿಗಳಿಗೆ ಉಚಿತ ರೇಬಿಸ್ ಲಸಿಕೆ ಕಾರ್ಯಕ್ರಮ ಇತ್ತೀಚಿಗೆ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಸ್ವಾಗತಿಸಿ, ರೇಬಿಸ್ ಲಸಿಕೆ ನೀಡುವುದರ ಮಹತ್ವದ ಬಗ್ಗೆ ಕಾರ್ಯಕ್ರಮದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾಸ್ತಾನ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸೂರಜ್ ಕುಮಾರ್, ಮಾತನಾಡಿ ರೇಬಿಸ್ ರೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಇದೇ ವೇಳೆ ಪಂಚಾಯತ್ ಕಛೇರಿಯಲ್ಲಿ ಸಾಕುನಾಯಿಗಳಿಗೆ ರೇಬಿಸ್ ಲಸಿಕೆ ನೀಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ತದನಂತರ ಕೋಡಿ ಕನ್ಯಾಣ ಹಾಲುಡೈರಿ ಹಾಗೂ ಕೋಡಿ ಹೊಸಬೆಂಗ್ರೆ ಅಂಗನವಾಡಿ ಕೇಂದ್ರಗಳಲ್ಲಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಕೆ ಪ್ರಭಾಕರ ಮೆಂಡನ್, ಸತೀಶ್ ಜಿ ಕುಂದರ್ , ಪಶು ವೈದ್ಯಕೀಯ ಪರೀಕ್ಷಕರು ಜೇನುಕಲ್ ಸಿದ್ದೇಶ್ವರ , ಗ್ರಾಮದ ಪಶು ಸಖಿ ಮಾಲತಿ , ಗ್ರಾಮಸ್ಥರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕೆ ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ ಚಾಲನೆ ನೀಡಿದರು. ಸಾಸ್ತಾನ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸೂರಜ್ ಕುಮಾರ್, ಪಂಚಾಯತ್ ಸದಸ್ಯರಾದ ಕೆ ಪ್ರಭಾಕರ ಮೆಂಡನ್ ಮತ್ತಿತರರು ಇದ್ದರು.














Leave a Reply