
ಕೋಟ: ಇಲ್ಲಿನ ಹರ್ತಟ್ಟುವಿನ ಕಲ್ಲಟ್ಟು ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಉತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಿತು. ಸಭೆಯ ಅಧ್ಯಕ್ಷತೆಯನ್ನು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಶೇವಧಿ
ಸುರೇಶ್ ಗಾಣಿಗ ವಹಿಸಿದ್ದರು.
ಕಾರ್ಯಕ್ರಮವನ್ನು ಕೋಟ ಅಮೃತೇಶ್ವರಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಇದೇ ವೇಳೆ ದೇಗುಲದ ಅಭಿವೃದ್ಧಿ ಕಾರ್ಯದಲ್ಲಿ ಆರ್ಥಿಕ ಸಹಕಾರ ನೀಡಿದ ಇಂದ್ರಪ್ರಸ್ಥ ಪ್ರಕಾಶ ಮಯ್ಯ ದಂಪತಿಗಳನ್ನು ಹಾಗೂ ಕೋಟ
ಅಮೃತೇಶ್ವರಿದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ರವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿತು.
ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯರಾದ ಅಜಿತ್ ದೇವಾಡಿಗ, ಉದ್ಯಮಿ ಸುಬ್ರಾಯ
ಆಚಾರ್,ಗುತ್ತಿಗೆದಾರ ರಾಜು ಪೂಜಾರಿ ಹೋಬಳಿಮನೆ, ಕೋಟ ಅಮೃತೇಶ್ವರಿ ದೇಗುಲದ ಟ್ರಸ್ಟಿ ರತನ್ ರಾಮದೇವ ಐತಾಳ್, ದೇಗುಲದ ಆಡಳಿತ ಮಂಡಳಿಯ ಉಪಾಧ್ಯಕ್ಷ ಶೇಖರ್ ದೇವಾಡಿಗ, ಕಾರ್ಯದರ್ಶಿ ಹರೀಶ್ ದೇವಾಡಿಗ, ಸಮಿತಿಯ ಪ್ರಮುಖರಾದ ತಿಮ್ಮ ಕಾಂಚನ್, ನಾಗರಾಜ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದೀಪಿಕಾ ರವಿ ಹಾಡಿಕೆರೆ ಸ್ವಾಗತಿಸಿ ನಿರೂಪಿಸಿ ವಂದಿಸಿದರು.ಇಲ್ಲಿನ ಹರ್ತಟ್ಟುವಿನ ಕಲ್ಲಟ್ಟು ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಉತ್ಸವದ ಅಂಗವಾಗಿ ದೇಗುಲದ ಅಭಿವೃದ್ಧಿ ಕಾರ್ಯದಲ್ಲಿ ಆರ್ಥಿಕ ಸಹಕಾರ ನೀಡಿದ ಇಂದ್ರಪ್ರಸ್ಥ ಪ್ರಕಾಶ ಮಯ್ಯ ದಂಪತಿಗಳನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು.