
ಕೋಟ: ವಿಜ್ಞಾನ ವಿಸ್ಮಯ ಕಾರ್ಯಕ್ರಮ ಅಭೂತಪೂರ್ವವಾದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶುಕ್ರವಾರ ಕೋಟ ಪಡುಕರೆ ಕೆ.ಸಿ ಕುಂದರ್ ಸಭಾಂಗಣದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ,ಪ್ರಾಥಮಿಕ, ಪ್ರೌಢಶಾಲಾ ವಿಭಾಗ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ಪ್ರಯೋಗಗಳ ಪ್ರಾತ್ಯಕ್ಷಿಕೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ ಇಂದು ವಿಶ್ವ ವಿಜ್ಞಾನದ ತಳಹದಿಯ ಮೇಲೆ ನಿಂತು ಕಾರ್ಯನಿರ್ವಹಿಸುತ್ತಿದೆ, ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೊರಗೆಳೆದು ವಿಜ್ಞಾನ ಎಂಬ ದೀವಿಗೆಯ ಮೂಲಕ ವಿಶ್ವದ ಗಮನ ಸೆಳೆಯಬೇಕಾಗಿದೆ ಈ ದಿಸೆಯಲ್ಲಿ ಪ್ರಾಥಮಿಕ ಹಂತದಲ್ಲಿ ಇದರ ಬಗ್ಗೆ ಕಾರ್ಯೋನ್ಮುಖವಾಗಲು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನೋಬಲ್ ಪಾರಿತೋಷಕ ವಿಜ್ಞಾನಿ ವಿಜ್ಞಾನ ವಿಸ್ಮಯ ಸರ್. ಸಿ.ವಿ. ರಾಮನ್ ಭಾವಚಿತ್ರಕ್ಕೆ ಪುಷ್ಭನಮನಗೈಯಲಾಯಿತು. ಶಾಲೆಯ ಪ್ರಾಂಗಣದೊಳಗೆ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ತರಹದ ಮಾದರಿಗಳನ್ನು ಪ್ರದರ್ಶಿಸಲಾಯಿತು.ಅಲ್ಲದೆ ವಿಶೇಷವಾಗಿ ಗಮನ ಸೆಳೆಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಘವೇಂದ್ರ ಕಾಂಚನ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಅಟಲ್ ಟಿಂಕರಿoಗ್ ಲ್ಯಾಬ್ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಬಾಲ ಗಂಗಾಧರ ಶೆಟ್ಟಿ, ಸಂದೇಶ್ ಕೆ.ಎಲ್, ಡಯೇಟ್ ವಿಜ್ಞಾನ ವಿಭಾಗದ ಸುಬ್ರಹ್ಮಣ್ಯ ಭಟ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ಲೋಕವನ್ನು ತಮ್ಮ ವಿಚಾರದ ಮೂಲಕ ತೆರೆದಿಟ್ಟರು. ಇದೇ ವೇಳೆ ವಿದ್ಯಾರ್ಥಿಗಳಿಗೆ ವಿಜ್ಞಾನದ ಪ್ರತಿಜ್ಞಾವಿಧಿಯನ್ನು ಸಂಯುಕ್ತ ಪ್ರೌಢಶಾಲಾ ಶಿಕ್ಷಕಿ ಅನುಪಮ ಹಂದೆ ಭೋಧಿಸಿದರು.
ಮುಖ್ಯ ಅಭ್ಯಾಗತರಾಗಿ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ , ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಮಂಜುನಾಥ ಹೊಳ್ಳ,ಪ್ರಾಥಮಿಕ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ನಾಗರಾಜ್ ಉಪಸ್ಥಿತರಿದ್ದರು.
ಫ್ರೌಢಶಾಲಾ ಮುಖ್ಯೋಪಾಧ್ಯಾಯ ವಿವೇಕಾನಂದ ವಿ. ಗಾಂವಕಾರ ಪ್ರಾಸ್ತಾವನೆ ಸಲ್ಲಿಸಿದರು. ಸಹ ಶಿಕ್ಷಕ ರಾಮದಾಸ್ ನಾಯಕ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಹಶಿಕ್ಷಕ ಹೆರಿಯ ಮಾಸ್ಟರ್ ನಿರೂಪಿಸಿದರು. ಗೀತಾನಂದ ಫೌಂಡೇಶನ್‌ನ ರವಿಕಿರಣ್ ಕಾಂಚನ್ ಸಹಕರಿಸಿದರು. ಗೀತಾನಂದ ಫೌಂಡೇಶನ್ ಮಣೂರು-ಪಡುಕರೆ ಸಹಕಾರ ನೀಡಿತು.
ಕೋಟ ಪಡುಕರೆ ಸರಕಾರಿ ಪದವಿ ಪೂರ್ವ ಕಾಲೇಜು , ಪ್ರಾಥಮಿಕ, ಪ್ರೌಢಶಾಲಾ ವಿಭಾಗ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ಪ್ರಯೋಗಗಳ ಪ್ರಾತ್ಯಕ್ಷಿಕೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್, ಮಣೂರು ಪಡುಕರೆ ಪ್ರವರ್ತಕ ಆನಂದ ಸಿ. ಕುಂದರ್ ಇಲೆಕ್ಟಿçಕ್ ಹಣತೆಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ ,ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಿ ಮತ್ತಿತರರು ಇದ್ದರು.














Leave a Reply