
ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಮಣೂರು ರಾಷ್ಟ್ರೀಯ ಹೆದ್ದಾರಿ ಬಾರಿ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಇದರ ನೇತೃತ್ವದಲ್ಲಿ ಕೋಟ ಗ್ರಾಮ ಪಂಚಾಯತ್ ,ಎಸ್ ಎಲ್ ಎಂ ಆರ್ ಘಟಕ, ಕೋಟ ಜೆಸಿಐ ಸಿನಿಯರ್ ಲಿಜನ್, ಮಣೂರು ಫ್ರೆಂಡ್ಸ್, ಹoದಟ್ಟು ಮಹಿಳಾ ಬಳಗ ಕೋಟ ಸಹಯೋಗದೊಂದಿಗೆ 244 ನೇ ಭಾನಿವಾರದ ಪರಿಸರಸ್ನೇಹಿ ಅಭಿಯಾನದ ಮೂಲಕ
ಸ್ವಚ್ಛಗೊಳಿಸಿತು.
ಈ ಸಂದರ್ಭದಲ್ಲಿ ಸುಮಾರು ಒಂದುವರೆ.ಕಿ.ಮೀ ವ್ಯಾಪ್ತಿಯಲ್ಲಿ 35ಕ್ಕೂ ಅಧಿಕ ಚೀಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆದ್ಸಾರಿಯಿಂದ ಮುಕ್ತಗೊಳಿಸಿತು. ಪoಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ,ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್,ಸಂಚಾಲಕ ಅಮೃತ್ ಜೋಗಿ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಪೂಜಾರಿ, ಹಂದಟ್ಟು ಮಹಿಳಾ ಬಳಗದ ಸುಜಾತ ಪೂಜಾರಿ, ಜೆಸಿಐ ಸಿನಿಯರ್ ಲಿಜನ್ ಕೋಟ ಮಾಜಿ ಅಧ್ಯಕ್ಷ ಕೇಶವ ಆಚಾರ್, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್ ವಿವಿಧ ಸಂಘಸoಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಇದ್ದರು.
ಕೋಟದ ಪಂಚವರ್ಣದಿoದ 244ನೇ ಭಾನುವಾರದ ಅಭಿಯಾನವನ್ನು ಕೋಟ ಮಣೂರು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿತು.

Leave a Reply