Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉನ್ನತವಾದ ಗುರಿ ಯಶಸ್ಸಿನ ಗುಟ್ಟು – ಶ್ರೀ ರಾಜು ಮೊಗವೀರ

ವಿದ್ಯಾರ್ಥಿ ಜೀವನದಲ್ಲಿ ಉನ್ನತವಾದ ಗುರಿಗಳನ್ನು ಹೊಂದುವುದು ಜೀವನದಲ್ಲಿ ಯಶಸ್ಸಿನ ಮೂಲ ಆಗಿದೆ. ಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಸಮೀಕರಣಗೊಂಡಾಗ ಮಾತ್ರ ಉತ್ತಮವಾದಂತಹ ಉದ್ಯೋಗವನ್ನು ಪಡೆಯುವುದು ಸಾಧ್ಯವಾಗುತ್ತದೆ. ಸರಕಾರದಲ್ಲಿ ಉನ್ನತವಾದ ಹುದ್ದೆಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿಯಾಗುತ್ತವೆ.

ಸತತವಾದ ಪ್ರಯತ್ನ, ಪರಿಶ್ರಮ ಮತ್ತು ಬದ್ಧತೆಯಿಂದ ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯವಿದೆ. ಇದೆಲ್ಲಕ್ಕೂ ಗುರಿ ನಿರ್ಧಾರವೇ ಮೊದಲ ಮೆಟ್ಟಿಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲ ಸಚಿವ ಶ್ರೀ ರಾಜು ಮೊಗವೀರ ಕೆಎಎಸ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿ ಆಯೋಜಿಸಿದ ಐದು ದಿನಗಳ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಈ ಭಾಗದ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದ ಹಂತದಲ್ಲಿ ರಾಜ್ಯಕ್ಕೆ ಉತ್ತಮ ಸಾಧನೆ ತೋರಿದರೂ ಸೈನ್ಯ, ಬ್ಯಾಂಕ್ ಅಥವಾ ಸರಕಾರದ ನೌಕರಿಗಳನ್ನು ಪಡೆಯುವಲ್ಲಿ ಬದ್ಧತೆ ತೋರಿಸಬೇಕಾದ ಅಗತ್ಯ ಇದೆ. ಈ ದಿಸೆಯಲ್ಲಿ ಎಲ್ಲರೂ ಪ್ರಯತ್ನಿಶೀಲರಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವೃತ್ತಿ ಮಾರ್ಗದರ್ಶನ ವಿಭಾಗದ ಸಂಚಾಲಕರಾದ ಡಾ. ದಶರಥ್ ಅಂಗಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಮಹತ್ವ ಮತ್ತು ಉದ್ದೇಶಗಳನ್ನು ಮನವರಿಕೆ ಮಾಡಿದರು. ಕಾರ್ಯಕ್ರಮದ ಸಂಚಾಲಕಿ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಡಾ. ನಳಿನಾಶ್ರೀ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ಸಹಾಯಕೆ ಪ್ರಾಧ್ಯಾಪಕ ಶ್ರೀ ಪ್ರಸ್ತುತೆ ವಂದಿಸಿದರು.

Leave a Reply

Your email address will not be published. Required fields are marked *