
ಕೋಟ: ಕೋಟತಟ್ಟು ಗ್ರಾಮಪಂಚಾಯತ್ ಹಾಗೂ
ಬಳಕೆದಾರರ ವೇದಿಕೆ ಉಡುಪಿ ಜಂಟಿ ಆಶ್ರಯದಲ್ಲಿ ಗ್ರಾಹಕ ಮಾಹಿತಿ ಜಾಗೃತಿ ಸಮಾವೇಶ ಕಾರ್ಯಕ್ರಮ ಕಾರಂತ ಥೀಮ್ ಪಾರ್ಕ್ನಲ್ಲಿ ಮಂಗಳವಾರ ಜರಗಿತು.
ಕಾರ್ಯಕ್ರಮವನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿ ಗ್ರಾಹಕ ಪರ ಹೋರಾಟದಲ್ಲಿ ತಮಗೆ ಆದ ಅನುಭವವನ್ನು ಹಂಚಿಕೊoಡರು, ಗ್ರಾಹಕರ ಹಿತಾಸಕ್ತಿಗಳ ಉತ್ತಮ ರಕ್ಷಣೆ, ಗ್ರಾಹಕ ವಿವಾದಗಳ ಸರಳ ಮತ್ತು ತ್ವರಿತ ಪರಿಹಾರ ಒದಗಿಸಲು ಕಾನೂನು ವ್ಯವಸ್ಥೆಯನ್ನು ಸ್ಥಾಪಿಸಲಾಗಿದೆ ಅದನ್ನು ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಗ್ರಾಹಕರ ಬಗ್ಗೆ ಇನ್ನು ಹೆಚ್ಚಿನ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ವಹಿಸಿದ್ದರು. ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ರಾಬರ್ಟ್ ರೊಡ್ರಿಗಸ್, ಪ್ರಕಾಶ್ ಹಂದಟ್ಟು, ಸಾಹಿರ ಬಾನು, ವಿದ್ಯಾ, ಬಳಕೆದಾರರ ವೇದಿಕೆ ಉಡುಪಿ ವಿಶ್ವಸ್ಥರಾದ ಪ್ರೊ. ನಾರಾಯಣನ್, ಪ್ರೊ. ಯು. ವಾದಿರಾಜ ಆಚಾರ್ಯ, ಹರಿಕೃಷ್ಣ ಶಿವತ್ತಾಯ, ಎನ್. ರಾಮಭಟ್, ಜಯಚಂದ್ರ ರಾವ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪoಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅವರು ಕಾರ್ಯಕ್ರಮ ನಿರೂಪಿಸಿದರು. ಹಾಗೂ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್ ಅವರು
ವಂದಿಸಿದರು. ಕೋಟತಟ್ಟು ಗ್ರಾಮಪಂಚಾಯತ್ ಹಾಗೂ
ಬಳಕೆದಾರರ ವೇದಿಕೆ ಉಡುಪಿ ಜಂಟಿ ಆಶ್ರಯದಲ್ಲಿ ಗ್ರಾಹಕ ಮಾಹಿತಿ ಜಾಗೃತಿ ಸಮಾವೇಶವನ್ನು ಉಡುಪಿ
ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ
ವಾಸು ಪೂಜಾರಿ ಇದ್ದರು.
Leave a Reply