Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕ್ರೀಡೆಯಿಂದ ಸೌಹಾರ್ದ ಮತ್ತು ಸ್ಪರ್ಧಾತ್ಮಕತೆ ಮುಖ್ಯ: ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ

ಬೈಂದೂರು : ಇಲ್ಲಿನ ತಾಲೂಕು ಆಡಳಿತ ಕಛೇರಿಯ ವತಿಯಿಂದ ಕಂದಾಯ ಉತ್ಸವ -2025, ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಶನಿವಾರ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.

ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಅವರು ಕಂದಾಯ ಉತ್ಸವ -2025, ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಂದಾಯ ಇಲಾಖೆ ಸಿಬ್ಬಂದಿ ತಮ್ಮ ಕರ್ತವ್ಯದ ಜೊತೆಗೆ ಕ್ರೀಡೆಯಲ್ಲಿ ಸ್ಪರ್ಧಾ ಮನೋಭಾವ ಮುಖ್ಯ. ಸೋಲು-ಗೆಲುವು ಸಾಮಾನ್ಯ. ಆದರೆ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡೆಯಿಂದ ಸೌಹಾರ್ದ ಮತ್ತು ಸ್ಪರ್ಧಾತ್ಮಕತೆ ಬರುತ್ತದೆ. ನೌಕರರು ಸಕ್ರಿಯವಾಗಿ ಭಾಗವಹಿಸುವುದರಿಂದ ಸಂತೋಷ ಕಾಣಲು ಸಾಧ್ಯ. ಈ ಒಂದು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಕ್ರೀಡೆಗೆ ಮೆರಗು ಹೆಚ್ಚಿಸಬೇಕು ಎಂದರು.

ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ ಗದ್ಯಾಳ್, ಉಡುಪಿ ತಹಶೀಲ್ದಾರ್ ಗುರುರಾಜ್ ಪಿ.ಆರ್, ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಎಸ್. ಹೆಗ್ಡೆ, ಕುಂದಾಪುರ ತಹಶೀಲ್ದಾರ್ ಮಲ್ಲಿಕಾರ್ಜುನ್, ಹೆಬ್ರಿ ತಹಶೀಲ್ದಾರ್ ಎಸ್.ಎ ಪ್ರಸಾದ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್,ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತ್ತು ಡಾಟಾ ಆಪರೇಟರ್ ಸಿಬ್ಬಂದಿಗಳು ಉಪಸ್ಥಿತರಿದ್ದರು

ಬೈಂದೂರು ತಹಶೀಲ್ದಾರ್ ಭೀಮಸೇನ ಕುಲಕರ್ಣಿ ಸ್ವಾಗತಿಸಿದರು. ಶಿಕ್ಷಕ ಗಣಪತಿ ಎಸ್ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದ್ದರು.

ವರದಿ : ಎಚ್ ಸುಶಾಂತ್ ಆಚಾರ್ ಬೈಂದೂರು

Leave a Reply

Your email address will not be published. Required fields are marked *