Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹೆಸಕುತ್ತೂರು ಪ್ರಾಥಮಿಕ ಶಾಲೆ : ರಾಷ್ಟೀಯ ವಿಜ್ಞಾನ ದಿನಾಚರಣೆ

ಕೋಟ: ವಿಜ್ಞಾನವು ನಮ್ಮ ಬದುಕಿನ ಪ್ರತಿ ಕ್ಷಣದಲ್ಲೂ ನಮ್ಮ ಪ್ರಜ್ಞೆಯನ್ನು ಜಾಗ್ರತವಾಗಿರಿಸಿ ವಿವೇಕವನ್ನು ಎಚ್ಚರವಾಗಿರಿಸಿ ಪ್ರತಿಯೊಂದನ್ನೂ ಪ್ರಶ್ನಿಸಿ. ತಿಳಿದು ಕೊಳ್ಳುವ ಅಭ್ಯಾಸವನ್ನು ಬೆಳೆಸುತ್ತದೆ. ಹೆಸಕುತ್ತೂರು ಪ್ರಾಥಮಿಕ ಶಾಲೆಯ ವಿಜ್ಞಾನ ಹಬ್ಬ ಮಕ್ಕಳಲ್ಲಿ ಎಳವೆಯಲ್ಲಿಯೇ ವೈಜ್ಞಾನಿಕ. ಮನೋಭಾವ ಮೂಡಿಸಲು ಪೂರಕ ಎಂದು.ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್
ನುಡಿದರು.

ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಹೆಸಕುತ್ತೂರು ಇಲ್ಲಿ ಆಯೋಜಿಸಲಾಗಿದ್ದ ರಾಷ್ಟೀಯ ವಿಜ್ಞಾನ ದಿನಾಚರಣೆ ಯುರೇಕ ಉದ್ಘಾಟಿಸಿ ಮಾತನಾಡುತ್ತಿದ್ದರು..ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ, ವಿದ್ಯಾರ್ಥಿಗಳೇ ತಮ್ಮ ಮನೆಗಳಿಂದ ಸoಗ್ರಹಿಸಿ ತಂದ ಪ್ರಾಚ್ಯ ವಸ್ತುಗಳ ಪ್ರದರ್ಶನ, ನಾಣ್ಯ ಸಂಗ್ರಹ ಪ್ರದರ್ಶನ,.ವಿವಿಧ ರೀತಿಯ ಪಕ್ಷಿಗಳ ಪರಿಚಯ ಹಾಗೂ ಹೂಗುಚ್ಛ ತಯಾರಿ ಸ್ಪರ್ಧೆ ಆಯೋಜಿಸಲಾಗಿತ್ತು. ಸರಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಉದಯ ಕುಮಾರ ಶೆಟ್ಟಿ, ವೆಂಕಟೇಶ ಮoಜ ತೀರ್ಪುಗಾರರಾಗಿ ಸಹಕರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಕೃಷ್ಣ ಕೆದ್ಲಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕöÈತ ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ ಕೆ ಎನ್, ಸರಕಾರಿ ಪ್ರೌಢಶಾಲೆ ಹೆಸಕುತ್ತೂರು ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್, ನಿವೃತ್ತ ಅಧ್ಯಾಪಕರಾದ ಜಯರಾಮ ಶೆಟ್ಟಿ, ಶಾಲಾ ಸಹಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮೀ ಬಿ, ವಿಜಯಾ ಆರ್, ರವೀಂದ್ರ ನಾಯಕ್, ಗೌರವ ಶಿಕ್ಷಕಿ ಮಧುರ
ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು, ವಿಜಯ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಸ್ವಾತಿ ಬಿ ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,
ಹೆಸಕುತ್ತೂರು ಇಲ್ಲಿ ಆಯೋಜಿಸಲಾಗಿದ್ದ ರಾಷ್ಟೀಯ ವಿಜ್ಞಾನ ದಿನಾಚರಣೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ.ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್ ಉದ್ಘಾಟಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ  ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ ಕೆ ಎನ್, ಸರಕಾರಿ ಪ್ರೌಢಶಾಲೆ ಹೆಸಕುತ್ತೂರು ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಇದ್ದರು.

Leave a Reply

Your email address will not be published. Required fields are marked *