Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಸ್ತಾನ: ಶ್ರೀನಿವಾಸ ಕಲ್ಯಾಣೋತ್ಸವ ನಮ್ಮ ಧಾರ್ಮಿಕ ಸಂಸ್ಕೃತಿಯ  ಪ್ರತೀಕ- ಸತೀಶ್ ಹೆಚ್ ಕುಂದರ್
ಶ್ರೀನಿವಾಸ ಕಲ್ಯಾಣೋತ್ಸವ ಪೋಸ್ಟರ್ ಬಿಡುಗಡೆಗೊಳಿಸಿ ಹೇಳಿಕೆ

ಕೋಟ: ಗ್ರಾಮದ ಕಲ್ಯಾಣಕ್ಕೆ ಶ್ರೀನಿವಾಸ ಕಲ್ಯಾಣೋತ್ಸವ ಸಹಕಾರಿ,ಧಾರ್ಮಿಕ ಪರಂಪರೆಯ ಮೂಲಕ ನಮ್ಮ ಸಂಸ್ಕçತಿಯ ಅನಾವರಣಕ್ಕೆ ಶ್ರೀನಿವಾಸ ಕಲ್ಯಾಣೋತ್ಸವ ಮುನ್ನುಡಿ ಬರೆಯಲಿದೆ ಎಂದು ಕೋಟದ ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಆಡಳಿತ ಧರ್ಮದರ್ಶಿ ಸತೀಶ್ ಹೆಚ್ ಕುಂದರ್ ಅಭಿಪ್ರಾಯಪಟ್ಟರು.

ಭಾನುವಾರ ಸಾಸ್ತಾನದ ಕಾರ್ತಿಕ್ ಎಸ್ಟೇಟ್ ನ ಶ್ರೀನಿವಾಸ ಕಲ್ಯಾಣೋತ್ಸವ ಕಛೇರಿಯಲ್ಲಿ ಇದೇ ಬರುವ ಎಪ್ರಿಲ್ 1ರಿಂದ 3ರ ತನಕ ನಡೆಯಲಿರುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಇದರ.ಪೋಸ್ಟರ್ ಬಿಡುಗಡೆಗೊಳಿಸಿ ಸನಾತನ ಪರಂಪರೆಯಲ್ಲಿ ಕಲ್ಯಾಣೋತ್ಸವಕ್ಕೆ ತನ್ನದೆಆದ ವೈಶಿಷ್ಟತೆಯನ್ನು  ಹೊಂದಿದೆ.

ಈ ದಿಸೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಲೋಕದ ಹಿತ
ಕಾಯಲಿದೆ ಎಂದು ಆಶಯ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಶ್ರೀನಿವಾಸ.ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಎಂ.ಸಿ ಚoದ್ರಶೇಖರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಮಾಜಿ ಅಧ್ಯಕ್ಷೆ ಸುಲತಾ ಎಸ್.ಹೆಗ್ಡೆ, ಉದ್ಯಮಿ.ನಿತ್ಯಾನಂದ ಶ್ಯಾನುಭಾಗ್, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಸಮಿತಿಯ ಪದಾಧಿಕಾರಿಗಳಾದ ರಘು ಮಧ್ಯಸ್ಥ, ಲೀಲಾವತಿ ಗಂಗಾಧರ್,ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಪ್ರಾಸ್ತಾವನೆ ಸಲ್ಲಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಮಿತಿಯ ರವೀಂದ್ರ ತಿoಗಳಾಯ ನಿರೂಪಿಸಿ ವಂದಿಸಿದರು..ಸಾಸ್ತಾನದ ಕಾರ್ತಿಕ್ ಎಸ್ಟೇಟ್ ನ ಶ್ರೀನಿವಾಸ. ಕಲ್ಯಾಣೋತ್ಸವ ಕಛೇರಿಯಲ್ಲಿ ಇದೇ ಬರುವ ಎಪ್ರಿಲ್ 1ರಿಂದ 3ರ ತನಕ ನಡೆಯಲಿರುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಇದರ ಪೋಸ್ಟರ್‌ನ್ನು ಕೋಟದ ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಆಡಳಿತ ಧರ್ಮದರ್ಶಿ ಸತೀಶ್ ಹೆಚ್ ಕುಂದರ್ ಬಿಡುಗಡೆಗೊಳಿಸಿದರು.

ಶ್ರೀನಿವಾಸ.ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಎಂ.ಸಿ ಚoದ್ರಶೇಖರ್, ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಸಾಲಿಗ್ರಾಮ ಪಟ್ಟಣಪಂಚಾಯತ್
ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಮಾಜಿ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ, ಉದ್ಯಮಿ ನಿತ್ಯಾನಂದ ಶ್ಯಾನುಭಾಗ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *