ಸಾವಳಗಿ: ನಗರಕ್ಕೆ ಮಂಗಳವಾರ ಭೇಟಿ ನೀಡಿದ್ದ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ಅವರು ನಗರದ ಸರ್ಕಾರಿ ಆಸ್ಪತ್ರೆಯ, ನ್ಯಾಯಬೆಲೆ ಅಂಗಡಿ, ನಾಡ ಕಾರ್ಯಾಲಯ, ಸೇರಿದಂತೆ ಅನೇಕ ಸ್ಥಳಗಳಲ್ಲಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು, ಆಸ್ಪತ್ರೆಗೆ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ಅವರು ಆಸ್ಪತ್ರೆಯ ಸಿಬ್ಬಂದಿವರ್ಗ, ದಾಖಲಾತಿ, ಮೇಡಿಸಿನ್, ಹೆರಿಗೆ ಕೇಂದ್ರ ಪರಿಶೀಲಿಸಿದರು.
ಸರ್ಕಾರಿ ಆಸ್ಪತ್ರೆಗಳು ಬಡವರ ಪಾಲಿನ ಸಂಜೀವಿನಿಯಂತೆ ಕಾರ್ಯನಿರ್ವಹಿಸಬೇಕು. ಈ ಹಿನ್ನೆಲೆಯಲ್ಲಿ ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಕಾರ್ಯನಿರ್ವಹಿಸುವುದು ಸೂಕ್ತ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ಸಲಹೆ ನೀಡಿದರು.

ಈ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಶ್ವೇತಾ ಬೀಡಕರ ಅವರು , ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಚಿಕಿತ್ಸೆ, ಹೆರಿಗೆಗೆ ಬರುವ ಗರ್ಭಿಣಿಯರಿಗೆ ಉಚಿತವಾಗಿ ತುರ್ತು ವಾಹನ ಸೌಲಭ್ಯ ಕಲ್ಪಿಸಬೇಕು. ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಉಪ ತಹಶೀಲ್ದಾರ್ ವೈ .ಎಚ್. ದ್ರಾಕ್ಷಿ, ಕಂದಾಯ ನಿರೀಕ್ಷಕ ಪ್ರಕಾಶ್ ಪವಾರ, ಗ್ರಾಮ ಆಡಳಿತ ಅಧಿಕಾರಿ ಸವಿತಾ ಗಂಗಾವತಿ, ವೈದ್ಯಾಧಿಕಾರಿಗಳಾದ ಡಾ|| ಎಸ್. ಎಸ್. ಬಿರಾದಾರ, ಡಾ|| ವಿವೇಕಾನಂದ ದಳವಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ: ಸಚೀನ ಆರ್ ಜಾಧವ ಸಾವಳಗಿ