Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

“ಸದೃಢ ದೇಹ ಮತ್ತು ಉತ್ತಮ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ – ಶ್ರೀ ಸೂರಜ್ ಕುಮಾರ್ ಶೆಟ್ಟಿ”

ಅತಿಯಾದ ಮೊಬೈಲ್ ಬಳಕೆ ಇಂದಿನ ಯುವಕರಲ್ಲಿ ದೈಹಿಕ ಶ್ರಮ ಮತ್ತು ಕ್ಷಮತೆಯನ್ನು ಕಡಿಮೆ ಮಾಡಿದೆ ಇದರಿಂದಾಗಿ ಯುವ ಜನರಲ್ಲಿ ಅನಾರೋಗ್ಯ ಕೂಡ ಕಂಡು ಬರುತ್ತಿದೆ. ಇದನ್ನು ತಡೆಗಟ್ಟಲು ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ಉತ್ತಮ.ಪ್ರದರ್ಶನ ನೀಡುವುದರ ಮೂಲಕ ಕ್ರೀಡೆಯಲ್ಲಿ ಸಾಧನೆ ಮಾಡಲು ಅವಕಾಶವಿದೆ. ‘ಸದೃಢ ದೇಹ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡಾ ಚಟುವಟಿಕೆಗಳು ಅತ್ಯಂತ ಸಹಕಾರಿಯಾಗಿದೆ’ ಎಂದು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸೂರಜ್ ಕುಮಾರ್ ಶೆಟ್ಟಿ ತಿಳಿಸಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿ ನಡೆದ 2024-25 ನೇ ಸಾಲಿನ ಕಾಲೇಜಿನ ವಾರ್ಷಿಕ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟರಾಮ್ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ತರಬೇತಿ ಪಡೆದು ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೆಚ್ಚಿನ ಪ್ರಶಸ್ತಿಗಳನ್ನು ತರುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ. ಗಿರೀಶ್ ಶಾನಭಾಗ್, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ.ಸಂಚಾಲಕ ಡಾ. ವಸಂತ್ ಜಿ, ದೈಹಿಕ ಶಿಕ್ಷಣ ನಿರ್ದೇಶಕ ಮಹಾಂತೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಅಕ್ಷತಾ ಪ್ರಾರ್ಥನೆ ಸಲ್ಲಿಸಿದರು. ಡಾ. ಗಂಗಾಧರ ಆರ್ ಎಚ್ ಸ್ವಾಗತಿಸಿದರು. ಉಪನ್ಯಾಸಕ ಪಾಂಡುರAಗ ಕಾರ್ಯಕ್ರಮವನ್ನು ನಿರೂಪಿಸಿದರು. ಕ್ರೀಡಾ ಸಮಿತಿ ಸಂಚಾಲಕರಾದ ಪ್ರಸ್ತುತ ವೈ ಎನ್ ವಂದಿಸಿದರು.

Leave a Reply

Your email address will not be published. Required fields are marked *