
ಕೋಟ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುoದಾಪುರ ಕೋಟೇಶ್ವರ ಇಲ್ಲಿಯ ಆಂತರಿಕ ಗುಣಮಟ್ಟ ಭರವಸಾ ಕೋಶ, ಮಹಿಳಾ ವೇದಿಕೆ ಹಾಗೂ ಎನ್ ಎಸ್ ಎಸ್ ಘಟಕ 1 ಮತ್ತು 2ರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.20ರಂದು ಕಾಲೇಜಿನಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರ ನಿವೃತ್ತ ಮುಖ್ಯೋಪಾಧ್ಯಾಯನಿ ಶಶಿಕಲಾ ಬಿಜೂರು, ಇವರು ಭಾಗವಹಿಸಿ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದು, ಅನೇಕ ಮಹಿಳೆಯರು ದೊಡ್ಡ ಹುದ್ದೆಗಳನ್ನು ಅಲಂಕರಿಸಿದ ಉದಾಹರಣೆಗಳಿವೆ. ಮಹಿಳೆಯರಿಗೆ ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿ ಉನ್ನತ ಗೌರವದಿಂದ ಬದುಕಲು
ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರನ್ನು ಗುರುತಿಸುವ
ಸಲುವಾಗಿ ಕುಂದಾಪುರದಲ್ಲಿ ಆಟೋ ಚಾಲಕಿಯರಾಗಿ ವೃತ್ತಿ ನಡೆಸುತ್ತಿರುವ ದೀಪಾ, ರೂಪ ಮತ್ತು ಸುಲೋಚನ ಇವರನ್ನು ಸನ್ಮಾನಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ನಾಗರಾಜ ವೈದ್ಯ ಎಂ, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ನಿರಂಜನ ಶರ್ಮಾ, ಮಹಿಳಾ ವೇದಿಕೆಯ ವಿದ್ಯಾರ್ಥಿ ಪ್ರತಿನಿಧಿಗಳಾದ ರಚನಾ ಮತ್ತು ದಿವ್ಯಶ್ರೀ ಇವರು ವೇದಿಕೆಯಲ್ಲಿಉಪಸ್ಥಿತರಿದ್ದರು. ಮಹಿಳಾ ವೇದಿಕೆಯ ಸಂಚಾಲಕರಾದ ರೋಹಿಣಿ ಇವರು ಸ್ವಾಗತಿಸಿ ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಅಮೃತ.ಇವರು ವಂದನಾರ್ಪಣೆ ಗೈದರು. ದ್ವಿತೀಯ.ಎಂ ಕಾಂ ವಿದ್ಯಾರ್ಥಿನಿ.ಚೈತನ್ಯ ಇವರು
ಕಾರ್ಯಕ್ರಮವನ್ನು ನಿರೂಪಿಸಿದರು.
ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ
ಕುoದಾಪುರ ಕೋಟೇಶ್ವರ ಇಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರಗಿತು. ಕುಂದಾಪುರ ನಿವೃತ್ತ ಮುಖ್ಯೋಪಾಧ್ಯಾಯನಿ ಶಶಿಕಲಾ ಬಿಜೂರು, ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ
ಕ್ಷೇಮಪಾಲನಾಧಿಕಾರಿಗಳಾದ ನಾಗರಾಜ ವೈದ್ಯ ಎಂ ಮತ್ತಿತರರು ಇದ್ದರು.
Leave a Reply