Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಇಂದಿನಿಂದ ಸಾಸ್ತಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ವೈಭವ

ಕೋಟ: ಇಂದಿನಿoದ ಮೂರು ದಿನಗಳ ಕಾಲ ಸಾಸ್ತಾನದ ಕಾರ್ತಿಕೇಯ ಎಸ್ಟೇಟ್ ಇಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಸಾಸ್ತಾನದಲ್ಲಿ ಜರಗಲಿಕ್ಕಿದೆ. ಸುಮಾರು 30ಸಾವಿರಕ್ಕೂ ಅಧಿಕ ಮಂದಿ ಈ ಕಲ್ಯಾಣೋತ್ಸವದಲ್ಲಿ ಭಾಗಿಯಾಗುವ ನಿರೀಕ್ಷೆ ಇದ್ದು ಇಂದು ಅಪರಾಹ್ನ 3ಗ.ಯಿಂದ  ಹೊರೆಕಾಣಿಕೆ ವಿವಿಧ ಭಾಗಗಳಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಲಿದೆ.

ಏಪ್ರಿಲ್ 2ರಂದು ಬೆಳಿಗ್ಗೆ 9:00 ರಿಂದ ದೇವತಾ ಪ್ರಾರ್ಥನೆ ನವಗ್ರಹ ಹೋಮ ಮಧ್ಯಾಹ್ನ 12 ರಿಂದ ಪೂರ್ಣಾಹುತಿ ಪ್ರಸಾದ ವಿತರಣೆ, ಮಧ್ಯಾಹ್ನ 3 ರಿಂದ ಶ್ರೀ ಪ್ರವೀಣ್ ಪಡುಕೆರೆ ನೇತೃತ್ವದಲ್ಲಿ ವಿಶೇಷ ಕುಣಿತ ಭಜನೆ ಸಂಜೆ 5:30ರಿಂದ ಶ್ರೀ ಪುತ್ತೂರು ಜಗದೀಶ್ ಆಚಾರ್ ಮತ್ತು ತಂಡದವರಿAದ ಭಕ್ತಿರಸಮಂಜರಿ, ರಾತ್ರಿ 7 ರಿಂದ ಶ್ರೀ ವಿದ್ವಾನ್ ಡಾ.ವಿಜಯ ಮಂಜರ್ ಪಾಂಡೇಶ್ವರ ಇವರಿಂದ ಧಾರ್ಮಿಕ ಸಂದೇಶ, ಎ.3ರಂದು ಸಾಲಿಗ್ರಾಮ ಶ್ರೀ ಗುರುದೇನರಸಿಂಹ ದೇವಸ್ಥಾನದಿಂದ ಕುಣಿತ ಭಜನೆ, ಸ್ತಬ್ದ ಚಿತ್ರ, ಚಂಡೆ ಹಾಗೂ ಸಕಲ ಮಂಗಳವಾದ್ಯಗಳೊAದಿಗೆ ಪದ್ಮಾವತಿ ಸಹಿತ ಶ್ರೀ ಶ್ರೀನಿವಾಸ ದೇವರ ದಿವ್ಯ ಶೋಭಾಯಾತ್ರೆ ನಡೆಯಲಿದೆ. ಸಂಜೆ 5ರಿಂದ ಶ್ರೀ ದೇವರ ವಿವಾಹ ಮಂಟಪ ಪ್ರವೇಶ, ಸೀಮಾಂತ ಪೂಜೆ, ವಿವಾಹ ಮಂಟಪಕ್ಕೆ ಶ್ರೀ ಪದ್ಮಾವತಿ ದೇವಿಯ ಆಗಮನ, ಸ್ವರ್ಣಮಣಿ ಬಂಧನ, ಮಹೂರ್ತ ನಿರೀಕ್ಷಣೆ, ಮಾಲಾಧಾರಣೆ, ಸಂಜೆ6.30ಕ್ಕೆ ಓದಗುವ ಗೋಧೂಳಿ ಲಗ್ನ ಸುಮೂರ್ತದಲ್ಲಿ ಶ್ರೀ ಶ್ರೀನಿವಾಸ ದೇವರಿಗೆ ಶ್ರೀ ಪದ್ಮಾವತಿ ದೇವಿಯು ಕನ್ಯಾದಾನ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ” ಕಂಕಣ, ಮಂಗಳಸೂತ್ರ ಸಮರ್ಪಣೆ, ವಿವಾಹ ಹೋಮ, ಮಂಗಳಾಚಾರಣೆ, ಮಹಾಪ್ರಸನ್ನ ಪೂಜೆ, ಅಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಲಿದೆ.

Leave a Reply

Your email address will not be published. Required fields are marked *