Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಡಿಪ್ಲೊಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ

ಡಿಪ್ಲೊಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ : 2025-26ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 06.05.2025 ರಿಂದ 06.06.2025 ರವರೆಗೆ ಅರ್ಜಿಯನ್ನು www.uahs.edu.in ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06.06.2025

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45% (ಕನಿಷ್ಠ ಶೇ. 40% ಪ.ಜಾ. ಮತ್ತು ಪ.ಪಂ./ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸುಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50% ರಷ್ಟುಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್‌ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ / ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ
ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ, ಕರ್ನಾಟಕ

: ಕಾಲೇಜು ಮತ್ತು ವಿಳಾಸ :
ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ – 576213, ಉಡುಪಿಜಿಲ್ಲೆ
ದೂರವಾಣಿ: 9108241342, 9686405090

Leave a Reply

Your email address will not be published. Required fields are marked *