
ಕೋಟ: ಪ್ರಸ್ತುತ ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಗುರು ಮುಖೇನ ಸರಿಯಾದ ಜ್ಞಾನಾರ್ಜನೆಯೊಂದಿಗೆ ಲಭ್ಯ ಅವಕಾಶಗಳ ಸದ್ಬಳಕೆಯಿಂದ ತಮ್ಮ ಕೌಶಲ್ಯ, ಪ್ರತಿಭೆಯನ್ನು ಪರಿಶ್ರಮ, ನಿಷ್ಠೆಯಿಂದ ಉದ್ದೀಪನಗೊಳಿಸಿಕೊಂಡರೆ ತಾವು ಗಳಿಸಿದ ವಿದ್ಯೆಯ ವರ್ಚಸ್ಸು ಅಧಿಕವಾಗುತ್ತದೆ. ವಿದ್ಯಾರ್ಥಿಗಳು ಶಿಸ್ತು ಬದ್ಧರಾಗಿ ಉತ್ಸಾಹದಿಂದ ಆಲಿಸುವ ಮನೋಭಾವ ಹಾಗೂ ಸುಸಂಸ್ಕೃತ ನಡವಳಿಕೆ ಹೊಂದುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿಯಬೇಕು. ಪಠ್ಯದೊಂದಿಗೆ ಪಠ್ಯ ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ಕೃಷ್ಠ ಜೀವನ ಮೌಲ್ಯಗಳನ್ನು ರೂಢಿಸಿಕೊಂಡರೆ ಉಜ್ವಲ ಭವಿಷ್ಯ ಸಾಧ್ಯವೆಂದು ಆಕಾಶ್ ಇನ್‌ಸ್ಟಿಟ್ಯೂಟ್ ಉಡುಪಿ ಇಲ್ಲಿನ ಹಿರಿಯ ಉಪನ್ಯಾಸಕ ಹಾಗೂ ಖ್ಯಾತ ಯಕ್ಷಗಾನ ಕಲಾವಿದರಾದ ಡಾ. ಪ್ರದೀಪ ವಿ. ಸಾಮಗ ನುಡಿದರು.
ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಪ್ರತಿಭಾ ದಿನಾಚರಣೆ ಸಿಂಚನ ಅಂತರ್ ತರಗತಿ ಪ್ರತಿಭಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಉತ್ತಮ ಹವ್ಯಾಸಗಳನ್ನು ಹೊಂದಿ ಬಾಳಪಯಣದಲ್ಲಿ ಯಶಸ್ಸಿನ ಶಿಖರವನ್ನು ತಲುಪಬೇಕೆಂದರು.
ತೃತೀಯ ಬಿ.ಕಾಂ. ನ ಕಾವ್ಯ ಮತ್ತು ತಂಡದವರು ಪ್ರಾರ್ಥಿಸಿದರು. ಸಾಂಸ್ಕೃತಿಕ ಸಂಚಾಲಕರಾದ ಡಾ. ಭಾಗೀರಥಿ ನಾಯ್ಕ ಸ್ವಾಗತಿಸಿ ಕೊನೆಯಲ್ಲಿ ಸಾಸ್ಕೃತಿಕ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಸ್ವರ್ಣಿತಾ ಅಂತಿಮ ಬಿ.ಎಸ್ಸಿ. ವಂದಿಸಿದರು. ವಿದ್ಯಾರ್ಥಿ ಕ್ಷೇವiಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಪ್ರಾಧ್ಯಾಪಕ ನಿರಂಜನ ಶರ್ಮ ಅತಿಥಿ ಪರಿಚಯ ಮಾಡಿದರು. ಕನ್ನಡ ಉಪನ್ಯಾಸಕಿ ಪ್ರೇಮಲಾಕ್ಷಿ ಕೆ.ಬಿ. ನಿರ್ಣಾಯಕರನ್ನು ಪರಿಚಯಿಸಿದರು.
ಕಾರ್ಯಕ್ರಮವನ್ನು ವಾಣಿಜ್ಯಶಾಸ್ತç ಉಪನ್ಯಾಸಕಿ ಶ್ವೇತಾ ಕುಮಾರಿ ನಿರೂಪಿಸಿದರು. ಬೆಸೆಂಟ್ ಮಹಿಳಾ ಕಾಲೆಜು ಮಂಗಳೂರು ಇಲ್ಲಿನ ಕನ್ನಡ ಪ್ರಾಧ್ಯಾಪಕ ಡಾ. ಗಿರಿಯಪ್ಪ, ಉಪನ್ಯಾಸಕರಾದ ಅಮಿತ ಕ್ರಮದಾರಿ ಹಾಗೂ ವಿದುಷಿ ಅರ್ಪಿತಾ ಹೆಗಡೆ ನಿರ್ಣಾಯಕರಾಗಿ ಆಗಮಿಸಿದ್ದರು. ಎಂ.ಕಾA. ತರಗತಿ, ತೃತೀಯ ಬಿ.ಕಾಂ. ಎ, ಬಿ.ಸಿ.ಎ. ತರಗತಿಯವರು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸಮಗ್ರ ತಂಡ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಕೋಟೇಶ್ವರ ಕಾಳಾವರ ವರದರಾಜ ಎಂ. ಶೆಟ್ಟಿ ಕಾಲೇಜಿನಲ್ಲಿ ಸಿಂಚನ ಅಂತರ್ ತರಗತಿ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವನ್ನು ಖ್ಯಾತ ಯಕ್ಷಗಾನ ಕಲಾವಿದರಾದ ಡಾ. ಪ್ರದೀಪ ವಿ. ಸಾಮಗ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ, ವಿದ್ಯಾರ್ಥಿ ಕ್ಷೇವiಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ರಾಷ್ಟಿçÃಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸಂಯೋಜನೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋಟೇಶ್ವರ ಇವರ ಸಹಭಾಗಿತ್ವದಲ್ಲಿ ಹೆಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ನಳಿನಾಕ್ಷಿ, ಆಪ್ತ ಸಮಾಲೋಚಕರು, ತಾಲೂಕು ಆರೋಗ್ಯ ಕೇಂದ್ರ, ಕುಂದಾಪುರ ಇವರು ಹೆಚ್‌ಐವಿ ಸೋಂಕಿನ ಲಕ್ಷಣಗಳು, ಪರಿಹಾರ ಚಿಕಿತ್ಸಾ ಕ್ರಮಗಳು ಮತ್ತು ಅನುಸರಿಸಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ತಿಳಿಸಿದರು.
ರೋಗ ಲಕ್ಷಣಗಳ ಕುರಿತಾದ ತಿಳಿವಳಿಕೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಎಂದರು. ವಿದ್ಯಾರ್ಥಿ ದೆಸೆಯಲ್ಲಿ ಆಕರ್ಷಣೆಗಳಿಗೆ ಬಲಿಯಾಗದೆ ನೈತಿಕ ಶುದ್ಧಿಯುಳ್ಳ ಜೀವನವನ್ನು ರೂಪಿಸಿಕೊಳ್ಳುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದರು. ಲೈಂಗಿಕ ಶಿಕ್ಷಣದ ಜ್ಞಾನ, ಸವಾಲಿನ ಸಂದರ್ಭದಲ್ಲಿ ಧೃತಿಗೆಡದ ಆತ್ಮವಿಶ್ವಾಸ ಅತಿ ಮುಖ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೋಟೇಶ್ವರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಜೈನ್ ಇವರು ವೈಯಕ್ತಿಕ ಜೀವನದಲ್ಲಿ ಪಾಳಿಸಬೇಕಾದ ಆರೋಗ್ಯ ಪೂರ್ಣ ಹವ್ಯಾಸಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರಾಮರಾಐ ಆಚಾರ್ಯ ವಹಿಸಿ, ಕಾರ್ಯಕ್ರಮದಲ್ಲಿ ತಿಳಿಸಿದ ಸಂಗತಿಗಳನ್ನು ಜೀವನದಲ್ಲಿ ಅನುಷ್ಠಾನಗೊಳಿಸುವುದು ಅಗತ್ಯ ಎಂದರು. ರಾಷ್ಟಿçÃಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ನಿರಂಜನ ಶರ್ಮ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಘಟಕ 1 ರ ಸಂಯೋಜನಾಧಿಕಾರಿ ಶ್ರೀಮತಿ ರೋಹಿಣಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಮತ್ತು ಸ್ಥಳೀಯ ಆಶಾ ಕಾರ್ಯಕರ್ತೆಯಾದ ಸುರೇಖಾ ಮತ್ತು ಮಲ್ಲಿಕಾ ಉಪಸ್ಥಿತರಿದ್ದರು. ಸ್ವಯಂ ಸೇವಕರಾದ ದೀಪಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿದರು, ಅಂಕ್ಷಯ ವಂದಿಸಿದರು.
Leave a Reply