
ವರದಿ : ಅಶ್ವಿನಿ ಅಂಗಡಿ
ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ಕಾರ್ಯಕ್ತಮದಲ್ಲಿ ಹೊಸದಾಗಿ ಒಂದನೇ ತರಗತಿಗೆ ದಾಖಲಾದ ಮಕ್ಕಳಿಗೆ ಒಂದು ಸಾವಿರ ರೂಪಾಯಿ ಠೇವಣಿ ಹಣ ಹಾಗೂ ಶಾಲಾ ಬ್ಯಾಗ್ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗುಳೇದಗುಡ್ಡದ ಒಪ್ಪತ್ತೇಶ್ವರ ಶ್ರೀಗಳು, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಹಾಂತೇಶ ನಾರಗಲ್, ತಾಲೂಕಾ ದೈಹಿಕ ಶಿಕ್ಷಣ ಪರಿ ವೀಕ್ಷಕ ಬಿ.ಎಚ್.ಹಳಗೇರಿ ಸೇರಿದಂತೆ ಗ್ತಾ.ಪಂ, ಪಿಕೆಪಿಎಸ್ ಅಧ್ಯಕ್ಷ, ಉಪಾಧ್ಯಕ್ಷ, ಎಸ್.ಡಿ.ಎಂ.ಸಿ.ಪದಾಧಿಕಾರಿಗಳು, ಊರಿನ ಗಣ್ಯರು, ಶಿಕ್ಷಣ ಇಲಾಖೆಯ ಮೇಲ್ವಿಚಾರಣಾಧಿಕಾರಿಗಳು, ಮುಖ್ಯಶಿಕ್ಷಕ, ಸಹಶಿಕ್ಷಕರು, ಪಾಲಕರು ಹಾಜರಿದ್ದರು.
Leave a Reply