
ಕುಂದಾಪುರ: ಇಲ್ಲಿನ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪರವರು ಅಸೌಖ್ಯದಿಂದ ಮೇ 21ರ ಬುಧವಾರ ರಾತ್ರಿ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ, ನಂಜಪ್ಪ (59) ಮೃತಪಟ್ಟ ಇನ್ಸ್ ಪೆಕ್ಟರ್. ನಂಜಪ್ಪ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ನಂಜಪ್ಪ ಅವರು ಕಳೆದ ಒಂದು ವರ್ಷದಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಕರಾವಳಿ ಕಾವಲು ಪಡೆ ಗಂಗೊಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಂಜಪ್ಪ ಅವರು ಕಳೆದ ಒಂದು ವರ್ಷದಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಕರಾವಳಿ ಕಾವಲು ಪಡೆ ಗಂಗೊಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Leave a Reply