Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಲ್ಪಸಂಖ್ಯಾತರ ವಸತಿ ನಿಲಯ ಪ್ರವೇಶ ಆರಂಭ

ವರದಿ : ಅಶ್ವಿನಿ ಅಂಗಡಿ

ಬಾಗಲಕೋಟೆ:  ಮೇ 31 : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳಲ್ಲಿ 2025-26ನೇ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪ್ರಥಮ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳ ಮನೆ ಹಾಗೂ ಕಾಲೇಜು ಮಧ್ಯೆ ಕನಿಷ್ಟ 5 ಕಿಮೀ ದೂರವಿದ್ದು, ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಜಾತಿ, ಆದಾಯ ಪ್ರಮಾಣ ಪತ್ರ, ಕಳೆದ ಸಾಲಿನ ಅಂಕಪಟ್ಟಿ, ಫೀ ರಶೀದಿ, ಅಂತರ ಪ್ರಮಾಣ ಪತ್ರ, 2 ಫೋಟೋಗಳೊಂದಿಗೆ ಜೂನ್ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆಯನ್ನು :http://shp.karnataka.gov.in  ವೆಬ್‌ಸೈಟ್‌ನಲ್ಲಿ ಭರ್ತಿ ಮಾಡಿ, ಪಾಂಶುಪಾಲರಿAದ ದೃಢೀಕರಿಸಿ, ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಗಳನ್ನು ಸಂಪರ್ಕಿಸುವAತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *