
ಕುಂದಾಪುರ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉದಯ ಮೆಂಡನ್ ರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಸ್ಥಳದಲ್ಲಿದ್ದ ಫೈಬರ್ ದೋಣಿ, ಮರಳು, ಟಿಪ್ಪರ್ ವಾಹನ ಸೇರಿದಂತೆ ಒಟ್ಟು 5,20,000 ರೂ. ವೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. .
ಕುಂದಾಪುರ ಪುರಸಭೆ ವ್ಯಾಪ್ತಿಯ ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ರಿಂಗ್ ರೋಡ್ ಸಮೀಪದ ಪಂಚಗಂಗಾವಳಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿದ್ದ ಉದಯ ಮೆಂಡನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಗೊಂಡಿದ್ದಾರೆಂದು ತಿಳಿದು ಬಂದಿದೆ. ಸುನಿಲ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Reply