
ಕೋಟ: ಮಂಗಳವಾರ ಗುಜರಾತಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಜಯಗಳಿಸಿ ಕಪ್ ತಮ್ಮದಾಗಿಸಿ ಕೊಳ್ಳಲಿ ಎಂದು ಇಲ್ಲಿನ ಕೋಟದ ಆರ್‌ಸಿಬಿ ಅಭಿಮಾನಿಗಳಿಂದ ಕೋಟ ಅಮೃತೇಶ್ವರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೀವನ್ ಮಿತ್ರ ಸೇವಾ ಟ್ರಸ್ಟ್ ನ ಮುಖ್ಯಸ್ಥ ನಾಗರಾಜ್ ಪುತ್ರನ್,ಕೋಟ ಪಂಚಾಯತ್ ಸದಸ್ಯರಾದ ಪ್ರದೀಪ್ ಸಾಲಿಯಾನ್, ಚಂದ್ರಪೂಜಾರಿ, ಸ್ಥಳೀಯರಾದ ಭರತ್ ಗಾಣಿಗ,ದೇಗುಲದ ಅರ್ಚಕ ವೃಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರ ಆಚಾರ್ ಪ್ರಾರ್ಥಿಸಿ ಪ್ರಸಾದ ವಿತರಿಸಿದರು.
ಆರ್‌ಸಿಬಿ ಅಭಿಮಾನಿಗಳಿಂದ ಕೋಟ ಅಮೃತೇಶ್ವರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಜೀವನ್ ಮಿತ್ರ ಸೇವಾ ಟ್ರಸ್ಟ್ ನ ಮುಖ್ಯಸ್ಥ ನಾಗರಾಜ್ ಪುತ್ರನ್,ಕೋಟ ಪಂಚಾಯತ್ ಸದಸ್ಯರಾದ ಪ್ರದೀಪ್ ಸಾಲಿಯಾನ್ ಇದ್ದರು.
Leave a Reply