
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಯ ಟ್ರಸ್ಟ್ ಬ್ರಹ್ಮಾವರ ತಾಲೂಕು ಪಾಂಡೇಶ್ವರ ವಲಯದ ಸಾಸ್ತಾನ ಕಾರ್ಯಕ್ಷೇತ್ರದ ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಡಬೆಟ್ಟು ಯೋಜನೆ ವತಿಯಿಂದ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಂಡಿತು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯನಿ ಇಂದಿರಾ ವಹಿಸಿದರು.
ಈ ಕಾರ್ಯಕ್ರಮದ ಬಗ್ಗೆ ಬ್ರಹ್ಮಾವರ ತಾಲೂಕಿನ ಕೃಷಿ ಅಧಿಕಾರಿ ರಾಘವೇಂದ್ರ ವಿಶ್ವಪರಿಸರದ ದಿನಕ್ಕೆ ಗಿಡ ನಾಟಿ ಕಾರ್ಯಕ್ರಮವನ್ನು ಏಕೆ ಮಾಡುತ್ತಾರೆ ಅದರಿಂದ ಪ್ರಯೋಜನ ಏನು ಪರಿಸರ ಸ್ವಚ್ಛತೆಯನ್ನು ಹೇಗೆ ಕಾಪಾಡಬೇಕು, ಪರಿಸರ ದಿನ ಒಂದು ದಿನವಾಗಿ ಉಳಿಯದೆ ನಿರಂತರತೆ ಇರಬೇಕು , ನಾಟಿ ಮಾಡಿದ ಗಿಡಗಳ ಪೋಷಣೆಯನ್ನು ಯಾವ ರೀತಿ ಮಾಡಬೇಕು ಎಂಬುವುದನ್ನು ಮನದಟ್ಟು ಮಾಡಿದರಲ್ಲದೆ ಪರಿಸರದ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಾಸ್ತಾನ ಒಕ್ಕೂಟದ ಉಪಾಧ್ಯಕ್ಷ ರಮೇಶ್ ಆಚಾರ್ಯ , ಶೌರ್ಯ ಟೀಮ್‌ನ ಸದಸ್ಯರಾದ ರೇಣುಕಾ, ವಲಯದ ಮೇಲ್ವಿಚಾರಕಿ ಜಯಲಕ್ಷ್ಮೀ ಮತ್ತು ಸ್ಥಳೀಯ ಸೇವಾ ಪ್ರತಿನಿಧಿ ಶೋಭಾ, ಜ್ಯೋತಿ ,ಹಾಗೂ ಒಕ್ಕೂಟದ ಪದಾಧಿಕಾರಿಗಳು, ತಂಡದ ಸದಸ್ಯರು, ಶಾಲೆಯ ಶಿಕ್ಷಕರು, ಮತ್ತು ಮಕ್ಕಳು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಾಸ್ತಾನ ಕಾರ್ಯಕ್ಷೇತ್ರದ ವತಿಯಿಂದ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಬ್ರಹ್ಮಾವರ ತಾಲೂಕಿನ ಕೃಷಿ ಅಧಿಕಾರಿ ರಾಘವೇಂದ್ರ ಮಾಹಿತಿ ನೀಡಿದರು. ಸಾಸ್ತಾನ ಒಕ್ಕೂಟದ ಉಪಾಧ್ಯಕ್ಷ ರಮೇಶ್ ಆಚಾರ್ಯ , ಶೌರ್ಯ ಟೀಮ್‌ನ ಸದಸ್ಯರಾದ ರೇಣುಕಾ, ವಲಯದ ಮೇಲ್ವಿಚಾರಕಿ ಜಯಲಕ್ಷ್ಮೀ ಇದ್ದರು.
Leave a Reply