Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಧನೆ ಮಾಡುವ ಛಲ ಇರಬೇಕು: ಪಾರ್ಶ್ವನಾಥ ಉಪಾಧ್ಯೆ

ವರದಿ ~ಸಚೀನ ಆರ್ ಜಾಧವ
ಸಾವಳಗಿ: ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಸು ಸಂಸ್ಕೃತ ಸಂಸ್ಕಾರ ಸೇವಾ ಮಂಚ ಅಧ್ಯಕ್ಷ ಪಂಡಿತ ಪಾರ್ಶ್ವನಾಥ ಉಪಾಧ್ಯೆ ಹೇಳಿದರು.

ಜಮಖಂಡಿ ತಾಲೂಕಿನ ಸಾವಳಗಿ ನಗರದ ಜೈನ ಮಂಗಲ ಕಾರ್ಯಾಲಯದಲ್ಲಿ ನಡೆದ ಸು ಸಂಸ್ಕೃತಿ ಸಂಸ್ಕಾರ ಸೇವಾ ಮಂಚ ಇವರ ಸಂಯುಕ್ತಾಶ್ರಯದಲ್ಲಿ ನಡೆದ 2024-25ರ ವಾರ್ಷಿಕ ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮೂರಾರ್ಜಿ, ನವೋದಯ ಮತ್ತು NMMS ಪರಿಕ್ಷೆ ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಮಲ್ಲಿಕಾರ್ಜುನ ಚಿನಿವಾಲ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಅಥಣಿಯ ಸಾಮಾಜಿಕ ಕಾರ್ಯಕರ್ತ ಮಂಜು ಮಾತನಾಡಿ ವಿದ್ಯಾರ್ಥಿಗಳು ವಿದ್ಯೆಯ ಜತೆಗೆ ಸಂಸ್ಕಾರ, ಶಿಸ್ತು ರೂಢಿಸಿಕೊಳ್ಳಬೇಕು, ತಂದೆ ತಾಯಿ, ಗುರು ಹಿರಿಯರನ್ನು ಗೌರವಿಸಬೇಕು. , ಮಹಾನ  ವ್ಯಕ್ತಿಗಳ ಕುರಿತಾದ ಪುಸ್ತಕಗಳನ್ನು ಓದಿ ಮಾರ್ಗದರ್ಶರನ್ನಾಗಿ ತೆಗೆದುಕೊಂಡು ನಮ್ಮ ಸಂಸ್ಕೃತಿಯನ್ನು ಬೆಳೆಸಿಕೊಳ್ಳಿ ನಾನು ಸು ಸಂಸ್ಕೃತ ಸಂಸ್ಕಾರ ಸೇವಾ ಮಂಚ ಸಂಸ್ಥೆಗೆ ಕೈಲಾದಷ್ಟು ಸಹಾಯ ಮಾಡುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಗ್ರಾಮದ ಆಗಮಿಸಿದ ಹಿರಿಯರು ಯುವಕರು, ಸಹ ಶಿಕ್ಷಕರರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *