
ಕೋಟ: ಉಡುಪಿ ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟತಟ್ಟು ಗ್ರಾಮ ಪಂಚಾಯತ್‌ನ ಪಡುಕರೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಡು ಹೂಳೆತ್ತುವ ಕಾಮಗಾರಿ ನಡೆಯುವ ಸ್ಥಳ ಹಾಗೂ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದರು..
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರ ಯೋಗಕ್ಷೇಮ ವಿಚಾರಿಸಿ ಈ ಉತ್ತಮ ಕಾರ್ಯಕ್ಕೆ ತುಂಬು ಹೃದಯದಿಂದ ಶ್ಲಾಘಿಸಿದರು.
ಇದೇ ವೇಳೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಗೈಯುತ್ತಿರುವ ಮಹಿಳೆಯರು, ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮೊತ್ತವನ್ನು ಹೆಚ್ಚಿಸುವ ಬೇಡಿಕೆಯನ್ನು ಪ್ರಸ್ತಾಪಿಸಿದರು, ಸಂಸದರು ಈಡೇರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ, ಸದಸ್ಯರಾದ ಅಶ್ವಿನಿ ದಿನೇಶ್, ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ವಿದ್ಯಾ ಸಾಲಿಯಾನ್, ರಾಬರ್ಟ್ ರೋಡ್ರಿಗಸ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಸಿಬ್ಬಂದಿ ನವೀನ್ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರು ಉಪಸ್ಥಿತರಿದ್ದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೋಟತಟ್ಟು ಪಡುಕರೆ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಪರಿಶೀಲನೆ ಹಾಗೂ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ, ಸದಸ್ಯರಾದ ಅಶ್ವಿನಿ ದಿನೇಶ್, ವಾಸು ಪೂಜಾರಿ, ಪ್ರಕಾಶ್ ಹಂದಟ್ಟು ಇದ್ದರು.
Leave a Reply