Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ

ಬೆಂಗಳೂರು : ‘ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)’ ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ  ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ. ಈ ಸಲದ ಕಾರ್ಯಕ್ರಮದ ವಿವರ ನೀಡುವ ಸಲುವಾಗಿ ಮಾಗಡಿ ರಸ್ತೆ ಕೊಟ್ಟಿಗೆಪಾಳ್ಯದ ‘ಸುದೀಕ್ಷಾ ಕನ್ವೆನ್ಷನ್ ಸೆಂಟರ್’ನಲ್ಲಿ ಆಯೋಜಿಸಿದ್ದ ‘ವಾಲ್ಗ’ ಸಮಾರಂಭದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್‌ ಶೆಟ್ಟಿ ಮಾಹಿತಿ ನೀಡಿದರು.

ಎಂದಿನಂತೆ ಈ ಸಲ ಕುಂದಾಪ್ರ ಕನ್ನಡ ಹಬ್ಬವನ್ನು ಹಲವು ವಿಶೇಷತೆಗಳೊಂದಿಗೆ ಆಚರಿಸಲಿದ್ದು, ಪ್ರತಿ ಸಲದಂತೆ ಭಾರಿ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅದರಲ್ಲೂ ಈ ಬಾರಿ 5 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸಂಭ್ರಮದಲ್ಲಿ ದಿನವಿಡೀ ಕಾರ್ಯಕ್ರಮಗಳಿದ್ದು, ಮತ್ತೊಂದು ಅದ್ಧೂರಿಗೆ ಈ ಸಮಾರಂಭ ಸಾಕ್ಷಿಯಾಗಲಿದೆ. ಎರಡೂ ದಿನ ಕುಂದಾಪುರ ಮೂಲದ ಒಬ್ಬೊಬ್ಬರು ಅತಿಗಣ್ಯ ಸಾಧಕರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಆ ಕುರಿತ ವಿವರ, ಮುಖ್ಯ ಅತಿಥಿಗಳ ಮಾಹಿತಿ ಸದ್ಯದಲ್ಲೇ ನೀಡಲಾಗುವುದು ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *