
ಕೋಟ: ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಕೋಟ ಗ್ರಾ.ಪಂ ವ್ಯಾಪ್ತಿಯ ಮಣೂರು ಪಡುಕರೆ ಕಡಲ ಕಿನಾರ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿ ರೂಪಿಸುವ ಕುರಿತು ಕೋಟ ಗ್ರಾಮಪಂಚಾಯತ್ ಪ್ರತಿನಿಧಿಗಳೊಂದಿಗೆ ಹಾಗೂ ಸ್ಥಳೀಯ ಉದ್ಯಮಿ ಆನಂದ್ ಸಿ ಕುಂದರ್ ರವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಂಬAಧಪಟ್ಟ ಮೀನುಗಾರಿಕಾ ಇಲಾಖೆ ಪ್ರವಾಸೋದ್ಯಮ ಇಲಾಖಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.ಕಳೆದ ಸಾಕಷ್ಟು ವರ್ಷಗಳಿಂದ ಈ ಭಾಗ ಪ್ರವಾಸಿಗರ ಕೇಂದ್ರವಾಗಿ ರೂಪುಗೊಳ್ಳುತ್ತಿದ್ದು ಇದನ್ನು ಅಭಿವೃದ್ಧಿ ಪಡಿಸುವ ಕುರಿತಂತೆ ಆನಂದ್ ಸಿಕುಂದರ್ ಸಂಸದರ ಬಳಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯರಾದ ಅಜಿತ್ ದೇವಾಡಿಗ ,ಚಂದ್ರ ಪೂಜಾರಿ, ಸಂಸದ ಆಪ್ತಸಹಾಯಕರಾದ ಹರೀಷ್ ಕುಮಾರ್ ಶೆಟ್ಟಿ, ಸಂಬoಧಿಸಿದ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಕೋಟ ಗ್ರಾ.ಪಂ ವ್ಯಾಪ್ತಿಯ ಮಣೂರು ಪಡುಕರೆ ಕಡಲ ಕಿನಾರ ಪ್ರದೇಶಕ್ಕೆ ಭೇಟಿ ನೀಡಿದರು.
Leave a Reply