
ಮಾದಕ ದ್ರವ್ಯ ಸೇವನೆ ವ್ಯಕ್ತಿಯ ಆರೋಗ್ಯ ಮತ್ತು ಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡವರಿಗೆ ಕಾನೂನಿನ ಅನ್ವಯ ವಿವಿಧ ಶಿಕ್ಷೆಗಳನ್ನು ನೀಡಲಾಗುತ್ತದೆ. ಮಾದಕ ದ್ರವ್ಯ ವ್ಯಸನವನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿಯನ್ನು ಬಹಳ ದೊಡ್ಡದು ಎಂದು ಶಂಕರನಾರಾಯಣ ಪೋಲಿಸ್ ಠಾಣೆಯ ಠಾಣಾಧಿಕಾರಿಗಳಾದ ಶ್ರೀ ಶಂಭುಲಿoಗಯ್ಯ ಎಮ್.ಇ. ಹೇಳಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದಲ್ಲಿ ಆಂತರಿಕ ಗುಣಮಟ್ಟ ಭರವಸಾಕೋಶ, ಮಾದಕ ದ್ರವ್ಯ ನಿರ್ಮೂಲನಾ ಸಮಿತಿ ಮತ್ತು ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕ ಡಾ.ವಸಂತ್ ಜಿ, ಉಪಸ್ಥಿತರಿದ್ದರು, ಸ್ನಾತಕೋತ್ತರ ವಿಭಾ ಸಂಯೋಜಕಿ ಕು.ಪ್ರಜ್ಞಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
Leave a Reply