
ಕೋಟ: ಇಲ್ಲಿನ ಕೋಟದ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದ ಸ್ವೀಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ಶಾಲಾ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉಡುಪಿ ಎಂ.ಜಿ.ಎo ಕಾಲೇಜಿನ ನಿವೃತ್ತ ಉಪನ್ಯಾಸಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣ, ಮಾತುಗಾರಿಕಾ ಕೌಶಲ, ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕು. ನಮ್ಮ ಸಂವಿಧಾನ ಹಾಗೂ ರಾಜಕೀಯ ವಿಷಯಗಳಲ್ಲಿ ಅಭಿಮಾನ ಹಾಗೂ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಯೋಗ್ಯ ಪ್ರಜೆಯಾಗುವುದರೊಂದಿಗೆ ದೇಶದ ಅಭಿವೃದ್ಧಿಪಥದಲ್ಲಿ ಅಪಾರ ಕೊಡುಗೆಗಳನ್ನು ನೀಡಬೇಕು ಎಂದು ಕರೆಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಪ್ರೀತಿರೇಖಾ ವಹಿಸಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ವಾಚಿಸಿದರು. ವೇದಿಕೆಯಲ್ಲಿ ವಾಕ್ಪತಿಯಾದ ವಿದ್ಯಾರ್ಥಿನಿ ಸಮೃದ್ಧಿ, ಉಪವಾಕ್ಪತಿಯಾದ ಪ್ರಗತಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೃಜನಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖಂಡ ಅಭಿಷೇಕ್ ಎಲ್ಲರನ್ನು ಸ್ವಾಗತಿಸಿದರೆ ಉಪ ಮುಖಂಡಳಾದ ಸೃಷ್ಟಿ ವಂದಿಸಿದರು.
ಕೋಟದ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದ ಸ್ವೀಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಡುಪಿ ಎಂ.ಜಿ.ಎo ಕಾಲೇಜಿನ ನಿವೃತ್ತ ಉಪನ್ಯಾಸಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಭಾಗಿಯಾದರು. ಶಾಲಾ ಮುಖ್ಯೋಪಾಧ್ಯಾಯಿನಿ ಪ್ರೀತಿರೇಖಾ, ವಿದ್ಯಾರ್ಥಿನಿ ಸಮೃದ್ಧಿ, ಪ್ರಗತಿ ಉಪಸ್ಥಿತರಿದ್ದರು.
Leave a Reply