
ಕೋಟ: ಕೋಟ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಶನಿವಾರ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿಜೆಪಿಯವರ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಜಯಪ್ರಕಾಶ್ ಹೆಗಡೆಯವರು ಭಾಗವಹಿಸಿ ಬಿಜೆಪಿಯವರು ಹೇಳಿದ ಸುಳ್ಳಿನ ಬಗ್ಗೆ ವಿವರಣೆಯನ್ನು ನೀಡಿ ಸಾರ್ವಜನಿಕರಿಗೆ ಸತ್ಯದರ್ಶನವನ್ನು ಮಾಡಿದರಲ್ಲದೆ, ಗ್ಯಾರಂಟಿ ಯೋಜನೆಗಳು ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಗಳಲ್ಲಿ ಜಾರಿಗೆ ತಂದoತ ಎಲ್ಲಾ ಯೋಜನೆಗಳನ್ನು ಜನರಿಗೆ ತಿಳಿಸಿ ಬಡವರ ಪರವಾದ ಎಲ್ಲಾ ಯೋಜನೆಗಳನ್ನು ದೇಶ ಹಾಗೂ ರಾಜ್ಯ ಕೊಡುಗೆ ನೀಡಿದ್ದು ಕಾಂಗ್ರೆಸ್ ಪಕ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಬಡವರ ಪರವಾಗಿ ಯಾವುದೇ ಯೋಜನೆಗಳನ್ನು ನೀಡದೆ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಬಡವರಿಂದ ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ, ಗ್ಯಾರಂಟಿಗಳು ರದ್ದಾದರೆ ಮುಂದೆ ನಾವು ಅಧಿಕಾರಕ್ಕೆರಬಹುದೆಂದು ಹಪ್ಪಹಪಿಸುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದರು.
ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಎ ಕುಂದರ್, ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೋಟ ವ್ಯವಸಾಯಕ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ತಿಮ್ಮ ಪೂಜಾರಿ, ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಪಟ್ಟಣ ಪಂಚಾಯತ್ ಮಾಜಿ ಸದಸ್ಯರಾದ ಅಚ್ಯುತ ಪೂಜಾರಿ, ಗ್ರಾಮೀಣ ಸಮಿತಿ ಅಧ್ಯಕ್ಷರಾದ ಚಂದ್ರ ಆಚಾರ್, ಇಂಟಕ್ ಅಧ್ಯಕ್ಷ ದೇವೇಂದ್ರ ಗಾಣಿಗ, ಸತೀಶ್ ಕುಂದರ್, ಅಶೋಕ್ ಶೆಟ್ಟಿ, ಗಣೇಶ್ ಪೂಜಾರಿ, ಹಿಂದುಳಿದ ವರ್ಗಗಳ ಅಧ್ಯಕ್ಷ ದಿನೇಶ್ ಬಂಗೇರ, ಅಮೃತೇಶ್ವರಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಶಿವ ಪೂಜಾರಿ, ಕಾರ್ಮಿಕ ಘಟಕದ ಅಧ್ಯಕ್ಷ ರವಿ ಪೂಜಾರಿ, ದೇವದಾಸ ಕಾಂಚನ್, ಮಹಾಬಲ ಮಡಿವಾಳ, ಭಾಸ್ಕರ ಶೆಟ್ಟಿ ಇನ್ನಿತರ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಕೋಟ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಶನಿವಾರ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿಜೆಪಿಯವರ ಸುಳ್ಳಿನ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಪಾಲ್ಗೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಎ ಕುಂದರ್, ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೋಟ ವ್ಯವಸಾಯಕ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ತಿಮ್ಮ ಪೂಜಾರಿ ಇದ್ದರು.
Leave a Reply