Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟೇಶ್ವರ –ಕೋಟದ ಪಂಚವರ್ಣದಿಂದ ಪರಿಸರ ಜಾಗೃತಿ ಕಾರ್ಯಾಗಾರ 12ನೇ ಮಾಲಿಕೆ
ಪರಿಸರ ಜಾಗೃತಿ ಪ್ರತಿಯೊಬ್ಬರಲ್ಲೂ ಬೆರೆಯಬೇಕು – ಪ್ರಸಾದ್ ಬೈಂದೂರು

ಕೋಟ: ಪ್ರಕೃತಿಯನ್ನು ಪ್ರೀತಿಸುವ ಮನೋಭಾವನೆ ಎಳೆ ವಯಸ್ಸಿನಲ್ಲೇ ಮೂಡಬೇಕು ಆಗ ಪರಿಸರ ಉಳಿಯಲು ಸಾಧ್ಯ ಎಂದು ಪರಿಸರವಾದಿ ಪ್ರಸಾದ್ ಬೈಂದೂರು ಅಭಿಪ್ರಾಯಪಟ್ಟರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಆಶ್ರಯದಲ್ಲಿ ಗೆಳೆಯರ ಬಳಗ ಕಾರ್ಕಡ, ನಿಸರ್ಗ ಇಕೋ ಕ್ಲಬ್ ಕೋಟೇಶ್ವರ ಇವರ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಬಡಾಕೆರೆ ಹಳವಳ್ಳಿ ಕುಂಬ್ರಿ ಇಲ್ಲಿನ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ  ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಪ್ಲಾಸ್ಟಿಕ್ ಮುಕ್ತ ಹಸಿರು ಪರಿಸರ ಸೃಷ್ಠಿಸುವ ವಿವಿಧ ರೀತಿಯ ಮಾಹಿತಿಯನ್ನು ವಿಧ್ಯಾರ್ಥಿಗಳಿಗೆ ನೀಡಿದರಲ್ಲದೆ ಪ್ರಕೃತಿಯಲ್ಲಿನ ಹಕ್ಕಿಗಳಿಗೆ ನೀರಿಡುವ ಕಾಯಕ, ವಿದ್ಯಾರ್ಥಿಗಳ ಆರೋಗ್ಯದಲ್ಲಿ ಉಪಯೋಗಿಸಬೇಕಾದ ಆಹಾರ ಸೇವನೆಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಕುಂದಾಪುರ ಸೇವಾ ಸಂಗಮ ಶಿಶು ಮಂದಿರ ಇದರ ವಿಶ್ವಸ್ಥ ಮಂಡಳಿಯ ಪ್ರಮುಖರಾದ ಚಂದ್ರಿಕಾ ಚಂದ್ರಮೋಹನ್ ಧನ್ಯ ಉದ್ಘಾಟಿಸಿ ಪಂಚವರ್ಣದ ಪರಿಸರ ಕಾಳಜಿ ಕಾರ್ಯಕ್ರಮಗಳನ್ನು ಪ್ರಶಂಸಿದರಲ್ಲದೆ ಪ್ರಸ್ತುತ ದಿನಗಳಲ್ಲಿ ಗಿಡ ನೆಟ್ಟು ಪೋಷಿಸುವ ಕಾಯಕ , ಸಮುದ್ರ ಮಲಿನಗೊಳ್ಳುತ್ತಿರುವ ಬಗ್ಗೆ ತಾಪಮಾನ ಕಾಲಘಟ್ಟದಲ್ಲಿ ಹಸಿರು ವಾತಾವರಣವನ್ನುದ ಅಗತ್ಯತೆಯ ಬಗ್ಗೆ ವಿವರಿಸಿದರು.
ಪಂಚವರ್ಣದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಪರಿಸರ ಜಾಗೃತಿಯ ಪ್ರತಿಜ್ಞಾ ವಿಧಿ ಭೋದಿಸಿದರು.
ಇದೇ ವೇಳೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪ್ರಸಾದ್ ಬೈಂದೂರು ಇವರನ್ನು ಗುರುತಿಸಿ ಗೌರವಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಪದ್ಮಾವತಿ ಕೆ,ಕೋಟೇಶ್ವರ ಗ್ರಾಮಪಂಚಾಯತ್ ಸದಸ್ಯೆ ಆಶಾ ಇದ್ದರು. ಸಂಘದ ಶಿಸ್ತು ಸಮಿತಿ ಅಧ್ಯಕ್ಷ ಅಜಿತ್ ಆಚಾರ್ ಪ್ರಾಸ್ತಾವನೆ ಸಲ್ಲಿಸಿದರು.
ಶಾಲಾ ಸಹ ಶಿಕ್ಷಕಿ ಮಂಗಳ ಟಿ.ಕೆ ವಂದಿಸಿದರೆ, ಕಾರ್ಯಕ್ರಮವನ್ನು ಪಂಚವರ್ಣದ ಸದಸ್ಯ ಮಹೇಶ್ ಹವಲ್ದಾರ್ ಬೆಳಗಾವಿ ಸ್ವಾಗತಿಸಿ ನಿರೂಪಿಸಿದರು. ಶಿಕ್ಷಕರಾದ ಅನಂತಯ್ಯ ನಾವಡ, ಅಶೋಕ್ ಸಹಕರಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಾಗಾರ ಕಾರ್ಯಕ್ರಮವನ್ನು ಕುಂದಾಪುರ ಸೇವಾ ಸಂಗಮ ಶಿಶು ಮಂದಿರ ಇದರ ವಿಶ್ವಸ್ಥ ಮಂಡಳಿಯ ಪ್ರಮುಖರಾದ ಚಂದ್ರಿಕಾ ಚಂದ್ರಮೋಹನ್ ಧನ್ಯ ಉದ್ಘಾಟಿಸಿದರು. ಪಂಚವರ್ಣದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಪದ್ಮಾವತಿ ಕೆ, ಕೋಟೇಶ್ವರ ಗ್ರಾಮಪಂಚಾಯತ್ ಸದಸ್ಯೆ ಆಶಾ ಇದ್ದರು.

Leave a Reply

Your email address will not be published. Required fields are marked *