
ಕೋಟ: ಪ್ರಕೃತಿಯಲ್ಲಿ ಅಸಮತೋಲನ ಇದು ಮನುಕುಲದ ಮೇಲೆ ಸಾಕಷ್ಟು ಪರಿಣಾಮ ಬೀರುವಂತೆ ಮಾಡಿದೆ ಇದಕ್ಕೆ ನಾವುಗಳೇ ಕಾರಣ ಅದಕ್ಕಾ ಹೆಚ್ಚು ಹೆಚ್ಚು ಗಿಡ ನೆಟ್ಟು ಪೋಷಿಸುವ ಕೆಲಸ ಆಗಲಿ ಎಂದು ಉಡುಪಿ ಅರಣ್ಯ ಇಲಾಖೆಯ ಅಧಿಕಾರಿ ವಾರಿಜಾಕ್ಷಿ ಹೇಳಿದರು.
ಮಣೂರು ಪಡುಕರೆ ವ್ಯಾಪ್ತಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ ,ಹಂದಟ್ಟು ಮಹಿಳಾ ಬಳಗ ಕೋಟ,ಗೀತಾನಂದ ಫೌಂಡೇಶನ್ ಮಣೂರು,ಅನ್ನಪೂರ್ಣ ನರ್ಸರಿ ಪೇತ್ರಿ,ಸಮುದ್ಯತಾ ಗ್ರೂಪ್ಸ್ ಕೋಟ,ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಇವರ ಸಹಭಾಗಿತ್ವದಡಿ 262ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ವಿಶಿಷ್ಟ ರೀತಿಯ ಮಹಿಳಾ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಪಂಚವರ್ಣ ಸಂಘಟನೆ ಪರಿಸರಕ್ಕೆ ಪೂರಕವಾಗಿ ವಿನೂತನ ಮಾದರಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಇದು ಪ್ರೇರಣೆ ನೀಡುವ ಕಾರ್ಯಕ್ರಮವಾಗಿದೆ ಇಂತಹ ಕಾರ್ಯಕ್ರಮ ಎಲ್ಲೆಡೆ ಪಸರಿಸಬೇಕು ಎಂದು ಆಶಿಸಿದರು.
ವಿಶೇವವಾಗಿ ಮಹಿಳಾ ಮಂಡಲದ ಪದಾಧಿಕಾರಿಗಳು ಸದಸ್ಯರು ಸುತ್ತಮುತ್ತಲಿನ ಮನೆಗಳಿಗೆ ತೆರಳಿ ಹಸಿರು ಜೀವ ಕಾರ್ಯಕ್ರಮದ ಅಂಗವಾಗಿ ಗಿಡ ನೆಟ್ಟು ಅದರ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಆಗಮಸಿದ ಪರಿಸರದ ಮಹಿಳೆಯರಿಗೆ ಗಿಡ ವಿತರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೋಟ ಗ್ರಾಮಪಂಚಾಯತ್ ಸದಸ್ಯೆ ಶಾರದ ಆರ್ ಕಾಂಚನ್,ಪAಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ವಂದಿಸಿದರು.ಕಾರ್ಯಕ್ರಮವನ್ನು ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು.ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 262ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ವಿಶಿಷ್ಟ ರೀತಿಯ ಮಹಿಳಾ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಉಡುಪಿ ಅರಣ್ಯ ಇಲಾಖೆಯ ಅಧಿಕಾರಿ ವಾರಿಜಾಕ್ಷಿ ಮಾತನಾಡಿದರು. ಪಂಚವರ್ಣಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಕೋಟ ಗ್ರಾಮಪಂಚಾಯತ್ ಸದಸ್ಯೆ ಶಾರದ ಆರ್ ಕಾಂಚನ್,ಪAಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಇದ್ದರು.
Leave a Reply