Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ವಿವೇಕ ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ

ಕೋಟ: ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚಿಗೆ ನೆರವೇರಿತು.

ಉದ್ಘಾಟಕರಾಗಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಥಮ ದರ್ಜೆ ಕಾಲೇಜು ಕಟೀಲು ಇದರ ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ  ಇವರು ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿ `ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಸುಪ್ತ ಪ್ರತಿಭೆ ಇರುತ್ತದೆ ಅದನ್ನು ವ್ಯಕ್ತಪಡಿಸಲು ಉತ್ತಮ ಲೇಖಕರ ಕೃತಿಗಳನ್ನು ಓದಿ ಸರಿಯಾಗಿ ಅರ್ಥೆಸಿಕೊಂಡು ಕಥೆ ಕವನ, ಹನಿಗವನ ಲೇಖನಗಳನ್ನು ಬರೆಯುವ ಅಭ್ಯಾಸ ವಿದ್ಯಾರ್ಥಿ ದೆಸೆಯಲ್ಲಿ ರೂಡಿಸಿಕೊಳ್ಳಬೇಕು, ಸಾಹಿತ್ಯವು ಮನುಷ್ಯ ಮನುಷ್ಯರ ನಡುವೆ ಸಹೃದಯತೆಯನ್ನು ಮೂಡಿಸುತ್ತದೆ.

ವಿದ್ಯಾರ್ಥಿಗಳು ಫೇಸ್ಬುಕ್, ವಾಟ್ಸಾಪ್ ಇನ್ಸಟಾ ಗ್ರಾಂ ಮುಂತಾದವುಗಳಲ್ಲಿ ವ್ಯರ್ಥವಾಗಿ ಸಮಯವನ್ನು ಹಾಳು ಮಾಡುವುದರ ಬದಲು ಸಾಹಿತ್ಯದಲ್ಲಿ ಅಭಿರುಚಿಯನ್ನ ಬೆಳೆಸಿಕೊಂಡು ಹೃದಯವಂತರಾಗಬೇಕೆoದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ  ಜಗದೀಶ ನಾವುಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.  ಕುಮಾರಿ ಭೂಮಿಕಾ ಕಾರ್ಯಕ್ರಮ ನಿರ್ವಹಿಸಿ ,ಉಪನ್ಯಾಸಕ  ಸದಾಶಿವ ಹೊಳ್ಳ ವಂದಿಸಿದರು ಸಂಘದ ಸಂಚಾಲಕ ಚಂದ್ರಶೇಖರ ಎಚ್.ಎಸ್ ಕಾರ್ಯಕ್ರಮ ಸಂಯೋಜಿಸಿದ್ದರು.

ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಾಹಿತ್ಯ ಸಂಘವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಥಮ ದರ್ಜೆ ಕಾಲೇಜು ಕಟೀಲು ಇದರ ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ ಇವರು ಸಾಹಿತ್ಯ ಸಂಘವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ  ಜಗದೀಶ ನಾವುಡ, ಉಪನ್ಯಾಸಕ  ಸದಾಶಿವ ಹೊಳ್ಳ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *