Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ: ಜಿಲ್ಲೆಯ ವಿವಿಧೆಡೆ ದನ ಕಳ್ಳತನ ಪ್ರಕರಣ : 8 ಮಂದಿ ಸೆರೆ : ವಾಹನಗಳ ವಶ : ಎಸ್‌ಪಿ ಹರಿರಾಮ್‌ ಶಂಕರ್‌…!!

ಉಡುಪಿ: ಜಿಲ್ಲಾದ್ಯಂತ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಲ್ಲಿ ನಡೆದ ದನ ಕಳ್ಳತನ ಪ್ರಕರಣದಲ್ಲಿ 8 ಮಂದಿ ಆರೋಪಿಯನ್ನು ಬಂಧಿಸಿ ಅವರು ಬಳಸಿದ್ದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಓರ್ವ ಆರೋಪಿ ಮೇಲೆ 35 ಹಾಗೂ ಇನ್ನೊರ್ವ ಆರೋಪಿ ಮೇಲೆ 14 ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

ಇತ್ತೀಚೆಗೆ ಕೋಟ ಪೊಲೀಸ್‌ ಠಾಣೆ ವ್ಯಾಪ್ತಿಯ ಬಿದ್ಕಲಕಟ್ಟೆ ಜಂಕ್ಷನ್‌ನಲ್ಲಿ ದನಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಒಂದು ಕಾರು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಆರೋಪಿ ಇಮ್ರಾನ್‌ ಮೇಲೆ ರಾಜ್ಯದ ವಿವಿಧ ಠಾಣೆ ವ್ಯಾಪ್ತಿಯಲ್ಲಿ ದನ ಕಳ್ಳತನಕ್ಕೆ ಸಂಬಂಧಿಸಿದ 35 ಪ್ರಕರಣ, ಇರ್ಷಾದ್‌ ಮೇಲೆ 14 ಪ್ರಕರಣ ದಾಖಲಾಗಿದೆ.

ಬೈಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯ ದನ ಕಳ್ಳತನ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ, ಮೂರು ವಾಹನ ವಶಕ್ಕೆ ಪಡೆಯಲಾಗಿದೆ. ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಒಂದು ವಾಹನ ವಶಪಡಿಸಿಕೊಳ್ಳಲಾಗಿದೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ, ಒಂದು ಕಾರು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಗೋ ಕಳ್ಳತನ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳ್ಳತನ ಪ್ರಕರಣ ಭೇದಿಸಲು ವಿವಿಧ ತಂಡಗಳನ್ನು ರಚನೆ ಮಾಡಿದ್ದೇವೆ. ಆಗದಂತೆಯೂ ಹಲವು ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *