
ಕೋಟ:ಕೋಟತಟ್ಟು ಗ್ರಾಮಪಂಚಾಯತ್ ಕೊರಗ ಸಮುದಾಯದ ಬಗೆಗಿನ ಕಾಳಜಿ ಅವರಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ಬುಮುಖ್ಯ ಪಾತಯ್ರ ವಹಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ ಇಬ್ರಾಹಿಂಪುರ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳವಾರ ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಪರಿಸರದ ಎಂಟು ಕೊರಗ ಕುಟುಂಬಕ್ಕೆ ಮನೆ ನಿರ್ಮಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕ ಮಹೇಶ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ಎಚ್ ಪ್ರಮೋದ್ ಹಂದೆ, ವಾಸು ಪೂಜಾರಿ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹಾಗೂ ಕೊರಗ ಕುಟುಂಬದ ಫಲಾನುಭವಿಗಳು ಉಪಸ್ಥಿತರಿದ್ದರು.
ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಪರಿಸರದ ಎಂಟು ಕೊರಗ ಕುಟುಂಬಕ್ಕೆ ಮನೆ ನಿರ್ಮಿಸುತ್ತಿರುವ ಸ್ಥಳಕ್ಕೆ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ ಇಬ್ರಾಹಿಂಪುರ ಭೇಟಿ ನೀಡಿದರು. ತಾ.ಪಂ ಸಹಾಯಕ ನಿರ್ದೇಶಕ ಮಹೇಶ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಸರಸ್ವತಿ ಇದ್ದರು.
Leave a Reply