
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಸಮುದಾಯ ಮತ್ತು ಅಭಿವೃದ್ಧಿ ಯೋಜನೆಯಡಿ ಗ್ರಾಮ ಕಲ್ಯಾಣ ನಿಧಿ ಮೂಲಕ ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಚಿಟ್ಟಿಬೆಟ್ಟು ಪರಿಸರದ ಕೊರಗ ಸಮುದಾಯದ ಎಂಟು ಹೊಸ ಮನೆ ನಿರ್ಮಾಣಕ್ಕೆ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಡೆಯವರ ನಿರ್ದೇಶನದಂತೆ 2ಲಕ್ಷ ಸಹಾಯವನ್ನು ಚಕ್ ವಿತರಣೆ ಗುರುವಾರ ನಡೆಯಿತು.
ಕಾಲೋನಿಯಲ್ಲಿ ಮಂಜೂರಾತಿ ಪತ್ರವನ್ನು ಬ್ರಹ್ಮಾವರ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನಾಧಿಕಾರಿ ರಮೇಶ್ ಪಿ .ಕೆ ಇವರು ಕೋಟದ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನ ಧರ್ಮದರ್ಶಿ ಆನಂದ್ ಸಿ ಕುಂದರ್ ಸಮ್ಮುಖದಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಮಾತನಾಡಿ ಈ ನೈಜ ಕಲ್ಯಾಣ ಕಾರ್ಯಕ್ರಮಕ್ಕೆ ಅನುದಾನ ಒದಗಿಸಿಕೊಟ್ಟ ಪೂಜ್ಯ ಖಾವಂದರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪರಿವಾರಕ್ಕೆ ಧನ್ಯವಾದ ಸಲ್ಲಿಸಿದರು.
ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ವಿದ್ಯಾ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಜನಜಾಗೃತಿ ಸದಸ್ಯರಾದ ಜಯರಾಮ ಶೆಟ್ಟಿ, ಚಂದ್ರ ಆಚಾರ, ವಲಯದ ಮೇಲ್ವಿಚಾರಕರಾದ ನಾಗೇಶ್ ಪೂಜಾರಿ, ಒಕ್ಕೂಟದ ಅಧ್ಯಕ್ಷೆ ಪ್ರೇಮಾ, ಸ್ಥಳೀಯ ಸೇವಾಪ್ರತಿನಿಧಿ ಶೋಭಾ ಶಂಕರ, ಗುಲಾಬಿ , ಶ್ರೀಲಕ್ಷ್ಮೀ , ಒಕ್ಕೂಟದ ಉಪಾಧ್ಯಕ್ಷರಾದ ಉದಯ, ಕೋಟ ಶೌರ್ಯ ವಿಪತ್ತು ಘಟಕದ ಭಾಸ್ಕರ್ ಆಚಾರ್, ಮಾಲಿನಿ ಹಾಗೂ ಕೊರಗ ಸಮುದಾಯದ ಫಲಾನುಭವಿಗಳು ಉಪಸ್ತಿತರಿದ್ದರು.
ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಚಿಟ್ಟಿಬೆಟ್ಟು ಪರಿಸರದ ಕೊರಗ ಸಮುದಾಯದ ಎಂಟು ಹೊಸ ಮನೆ ನಿರ್ಮಾಣಕ್ಕೆ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಡೆಯವರ ನಿರ್ದೇಶನದಂತೆ 2ಲಕ್ಷ ಸಹಾಯವನ್ನು ಚಕ್ ವಿತರಣೆ ಗುರುವಾರ ನಡೆಯಿತು. ಬ್ರಹ್ಮಾವರ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನಾಧಿಕಾರಿ ರಮೇಶ್ ಪಿ .ಕೆ, ಕೋಟದ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನ ಧರ್ಮದರ್ಶಿ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಇದ್ದರು.
Leave a Reply