
ಕೋಟ: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಸಾಮಾಜಿಕ ಸೇವೆಯಲ್ಲಿ ಭಾಗವಹಿಸಬೇಕು. ಅವಕಾಶ ಸಿಕ್ಕಾಗ ಇತರರಿಗೆ ಸಹಾಯ ಆಗುವ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಲ್ಲಿ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ, ಇದರೊಂದಿಗೆ ಪರಿಸರ ಪ್ರೇಮವನ್ನು ಬೆಳೆಸಿಕೊಂಡು ಅದರ ರಕ್ಷಣಾ ಕಾರ್ಯದಲ್ಲಿ ತೊಡಗಿ ಪರಿಸರ ಸ್ನೇಹಿ ಆಗಬೇಕೆಂದು ಕರೆಯಿತ್ತರು.
ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಶೆಟ್ಟಿ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಪವನ್ ಕುಮಾರ ವೇದಿಕೆಯಲ್ಲಿದ್ದರು.
ಸಂಘದ ಕಾರ್ಯದರ್ಶಿ ಕುಮಾರಿ ಕೃಪಾ ವಂದಿಸಿ,
ಕುಮಾರಿ ಭೂಮಿಕಾ ಟಿ ಡಿ ನಿರೂಪಿಸಿದರು. ಸಂಘದ ಸಂಚಾಲಕ ಕೃಷ್ಣ ಕಾರ್ಯಕ್ರಮ ಸಂಯೋಜಿಸಿದ್ದರು.
ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಮಾಜ ಸೇವಾ ಸಂಘವನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಇದ್ದರು.
Leave a Reply