Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಜ್ವಲ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ (ರಿ). ಉಡುಪಿ ಇದರ ಆಶ್ರಯದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ

ಉಜ್ವಲ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ (ರಿ). ಉಡುಪಿ ಇದರ ಆಶ್ರಯದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವು ದಿನಾಂಕ 02/08/2025 ಶನಿವಾರದಂದು ಅಂಬಲಪಾಡಿಯ “ವಸಂತ ಮಂಟಪ”ದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷರಾಗಿ ಐರಿನ್ ಅಂದ್ರಾದೆ,‌ ಅಧ್ಯಕ್ಷರು… ಉಜ್ವಲ ಸಂಜೀವಿನಿ ಒಕ್ಕೂಟ ಇವರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಯಶ್ಪಾಲ್ ಎ ಸುವರ್ಣ, ಯುವ ಉದ್ಯಮಿ ಪ್ರಸಾದ್ ರಾಜ್ ಕಾಂಚನ್,‌ ರಮೇಶ್ ಕಾಂಚನ್ ಅಧ್ಯಕ್ಷರು ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ,‌ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಕಕ್ಷರಾದ ಶ್ರೀಮತಿ ಸುಜಾತಾ ಯೋಗೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಸಿಧ್ಧೇಶ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಉದ್ಯಮಿಗಳು ಅಂಬಲಪಾಡಿ, ಸ್ವರ್ಣ ಸಂಜೀವಿನಿ ತಾಲೂಕು ಮಟ್ಟದ ಅಧ್ಯಕ್ಷರಾದ ಶ್ರೀಮತಿ ಸುಲೋಚನಾ ಕುಂದರ್, ಶ್ರೀಮತಿ ವಿಜಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಾಲೂಕು ಪಂಚಾಯತ್ ಉಡುಪಿ,‌ ಯುವಕ ಮಂಡಲ ಅಂಬಲಪಾಡಿ ಅಧ್ಯಕ್ಷರಾದ ಹರೀಶ್ ಆಚಾರ್ಯ, ಶಿವ ಕುಮಾರ್ ಅಂಬಲಪಾಡಿ ಅಧ್ಯಕ್ಷರು ಬಿಲ್ಲವ ಸೇವಾ ಸಂಘ ಅಂಬಲಪಾಡಿ… ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತುಳುನಾಡಿನ ಸಂಸ್ಕೃತಿಯ ಪ್ರತೀಕ ಆಟಿ ಕಳಂಜನಿಗೆ ಕಾಣಿಕೆ ನೀಡುವ ಮೂಲಕ ಪ್ರಸಾದ್ ರಾಜ್ ಕಾಂಚನ್ ರವರು ಕಾರ್ಯಕ್ರಮದ ಉಧ್ಘಾಟನೆ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಯುವ ವಾಹಿನಿ (ರಿ) ಉಡುಪಿ. ಇದರ ಅಧ್ಯಕ್ಷರಾದ ಶ್ರೀ ದಯಾನಂದ್ ಕರ್ಕೇರ ಉಗ್ಗೆಲ್ ಬೆಟ್ಟು ಇವರು ಆಟಿ ತಿಂಗಳ ಮಹತ್ವದ ಬಗ್ಗೆ ಹಾಗೂ ತುಳುನಾಡ  ಸಂಸ್ಕೃತಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ನಿವೃತ್ತ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಾಡಿ…ಶ್ರೀಮತಿ ಜೆನೇವೀವ್ ಲೋಬೋ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಆಟಿ ತಿಂಗಳ 42 ವಿವಿಧ ಬಗೆಯ ಖಾಧ್ಯಗಳನ್ನು ಉಜ್ವಲ ಸಂಜೀವಿನಿ  ಸದಸ್ಯರೇ ತಯಾರಿಸಿ ತಂದು ಸಹಭೋಜನ ಕೂಟ ಕೂಡಾ ಯಶಸ್ವಿಯಾಗಿ ನಡೆಯಿತು.

ಈ ಸಂಧರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪಧಾದಿಕಾರಿಗಳು & ಸದಸ್ಯರು ಉಪಸ್ಥಿತರಿದ್ದರು. ಶ್ರೀಮತಿ ಗೀತಾ ಹರೀಶ್ ಪಾಲನ್ ಕಾರ್ಯಕ್ರಮದ ನಿರೂಪಣೆ ಮಾಡಿದರು. ಸೌಮ್ಯ ಪಡುಕೆರೆ ಅವರು ಎಲ್ಲರಿಗೂ ವಂದನಾರ್ಪಣೆ ನೆರವೇರಿಸಿದರು.

Leave a Reply

Your email address will not be published. Required fields are marked *