
ಕೋಟ : ಗೆಳೆಯರ ಬಳಗ ಯುವಕ ಸಂಘ ದಾನಗುಂದು, ಹಂದಟ್ಟು, ಕೋಟ ಕಳೆದ 25 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ ಗಣೇಶ ಉತ್ಸವ ಹಂದಟ್ಟು ಚೌತಿಗೆ ಈ ಬಾರಿ ಬೆಳ್ಳಿ ಹಬ್ಬದ ಸಂಭ್ರಮ ಆ ಪ್ರಯುಕ್ತ ಶ್ರೀ ಕ್ಷೇತ್ರ ಅಮೃತೇಶ್ವರಿ ದೇವಸ್ಥಾನದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ, ಕಳೆದ 25 ವರ್ಷಗಳಿಂದ ಗೆಳೆಯರ ಬಳಗ ವಿಶೇಷವಾಗಿ ಗಣೇಶ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದೆ. ಸಾರ್ವಜನಿಕ ಉಪಯೋಗಕ್ಕೆ ಸ್ವಂತ ಜಾಗದಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಸಂಸ್ಥೆಯ ಸಾಮಾಜಿಕ ಕಳಕಳಿ ಎಲ್ಲರಿಗೂ ಮಾದರಿ ಎಂದು ಶ್ಲಾಘಿಸಿದರು.
ಬೆಳ್ಳಿ ಹಬ್ಬದ ಪ್ರಯುಕ್ತ ಆಗಸ್ಟ್ 27 ರಿಂದ 31 ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳ ಜೊತೆ ಜೊತೆಗೆ ಲೋಕಕಲ್ಯಾಣಾರ್ಥ ಸಹಸ್ರ ನಾರಿಕೇಳ ಗಣಯಾಗ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ಗೆಳೆಯರ ಬಳಗ ಯುವಕ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಗೆಳೆಯರ ಬಳಗ ಯುವಕ ಸಂಘ ದಾನಗುಂದು, ಹಂದಟ್ಟು, ಕೋಟ ಇದರ ಹಂದಟ್ಟು ಚೌತಿ – ಬೆಳ್ಳಿ ಹಬ್ಬದ ಆಹ್ವಾನ ಪತ್ರಿಕೆಯನ್ನು ಶ್ರೀ ಕ್ಷೇತ್ರ ಅಮೃತೇಶ್ವರಿ ದೇವಸ್ಥಾನದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು.













Leave a Reply